Thursday, September 19, 2024
spot_img
spot_img
spot_img
spot_img
spot_img
spot_img
spot_img

ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ; ಶಿಕ್ಷಕ Arrest.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಮಂಗಳೂರು : ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಆತನ ವಿರುದ್ಧ ಬೆಳ್ತಂಗಡಿ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾದ ಆರೋಪಿತ ಶಿಕ್ಷಕನನ್ನು ವಿರಾಜ್‌ ಎಂದು ಹೇಳಲಾಗುತ್ತಿದೆ. ಈತ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ (Private) ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿರುದಾಗಿ ತಿಳಿದು ಬಂದಿದೆ.

ಇದನ್ನು ಓದಿ : Intelligence Department ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ; ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ.!

ಶಿಕ್ಷಕ 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ (Porn video) ತೋರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಎನ್ನಲಾಗಿದೆ.

ಪೋಷಕರ ಮುಂದೆ ಇದೇ ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾಳೆ. ಆಗ ಪೋಷಕರು ಏಕೆ ಎಂದು ವಿಚಾರಿಸಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಶಾಲೆಯ ಶಿಕ್ಷಕ ಕಳೆದ ವರ್ಷ ಜೂನ್​​ನಿಂದ ಇಲ್ಲಿಯವರೆಗೂ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ.

ಇದನ್ನು ಓದಿ : Cinema : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ.!

ಪೊಲೀಸರು ಪೋಕ್ಸೋ (Pocso) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬೆಳ್ತಂಗಡಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img