Tuesday, September 17, 2024
spot_img
spot_img
spot_img
spot_img
spot_img
spot_img
spot_img

SWR : ಬೆಳಗಾವಿ – ಮೀರಜ್ ನಡುವೆ ವಿಶೇಷ ರೈಲು ; ನೈರುತ್ಯ ರೈಲ್ವೆ.

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡಲಾಗುತ್ತಿದೆ.

ಹೀಗಾಗಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ ಬರುವಂತಹ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ.

ಇದನ್ನು ಓದಿ : ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್‌ ಯೋಜನೆಯಡಿ 300 ಯುನಿಟ್‌ ವಿದ್ಯುತ್‌ ಫ್ರೀ ; ಡೈರೆಕ್ಟ್ Link ಇಲ್ಲಿದೆ.!

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿಯಿಂದ ಮಿರಜವರಗೆ ಪ್ಯಾಸೆಂಜರ್ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಗಸ್ಟ್ 1 ರಿಂದ 4 ದಿನಗಳವರೆಗೆ ಪ್ಯಾಸೆಂಜರ್ ವಿಶೇಷ ರೈಲು ಬಿಡಲು ಆದೇಶಿಸಿರುತ್ತಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಮಂಗಳವಾರ ಜು. 30ರಂದು ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ಬೆಳಗಾವಿ ಮೀರಜ್ ರೈಲು (07301) ಅ.1 ರ ಮುಂಜಾನೆ 06 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 09ಕ್ಕೆ ಮಿರಜ ನಿಲ್ದಾಣ ತಲುಪಲಿದೆ.

ಇದನ್ನು ಓದಿ : Special news : ಕ್ಯಾನ್ಸರ್, ಹೃದ್ರೋಗ ಅಪಾಯ ಕಡಿಮೆಯಂತೆ ಈ ರಕ್ತದ ಗುಂಪು ಹೊಂದಿರುವವರಿಗೆ.!

ಮೀರಜ್ -ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 09.50 ಕ್ಕೆ ಮೀರಜ್ ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.

ಬೆಳಗಾವಿ- ಮಿರಜ ರೈಲು (07303) ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ.

ಇದನ್ನು ಓದಿ : ಮಗುವಿನ ಮೇಲೆ ಬೀದಿ ನಾಯಿಯಿಂದ ದಾಳಿ : ಹಿರೋನಂತೆ ಎಂಟ್ರಿ ಕೊಟ್ಟು ರಕ್ಷಿಸಿದ ಸಾಕು ನಾಯಿ, ವಿಡಿಯೋ Viral.!

ಮೀರಜ್ -ಬೆಳಗಾವಿ ರೈಲು ಸಂಖ್ಯೆ (07304) ಸಂಜೆ 05.35 ಕ್ಕೆ ಮೀರಜ್ ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.

ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು. ಅಲ್ಲದೇ ಈ ವೇಳೆ ನಮ್ಮ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ನೈರುತ್ಯ ರೈಲ್ವೆ ಮಹಾ ಪ್ರಬಂಧಕರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img