ಜನಸ್ಪಂದನ ನ್ಯೂಸ್, ಗೋಕಾಕ್ : ಮೂವರು ವಿದ್ಯಾರ್ಥಿಗಳು ಸೇರಿ ಓರ್ವ ವಿದ್ಯಾರ್ಥಿಗೆ ಚಾಕು ಇರಿದ ಘಟನೆ ಗೋಕಾಕ್ ನಗರದಲ್ಲಿರುವ (Gokak City) ಸರಕಾರಿ ಪ್ರೌಢ ಶಾಲೆಯ ಪಕ್ಕದಲ್ಲಿರುವ ವಾಲ್ಮೀಕಿ ಮೈದಾನದಲ್ಲಿ ನಡೆದಿದೆ.
10 ನೇ ತರಗತಿಯ ವಿದ್ಯಾರ್ಥಿಗೆ ಎಂಬಾತನಿಗೆ ಮೂವರು ಸಹಪಾಠಿಗಳು ಸೇರಿ ಚಾಕುವಿನಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಅವನಿಗಾಗಿ ನಡುರಸ್ತೆಯಲ್ಲಿ ಯುವತಿಯರ ಬಿಗ್ ಫೈಟಿಂಗ್ ; Video ನೋಡಿ.!
ಈ ಮೂವರು ವಿದ್ಯಾರ್ಥಿಗೆ ತಮ್ಮ ಸ್ಕೂಲ್ ಬ್ಯಾಗ ತರಲು ಹೇಳಿದ್ದಾರೆ. ಆದರೆ ಆತ ಬ್ಯಾಗ್ ತರುವುದಿಲ್ಲ (Don’t bring a bag) ಎಂದು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಮೂವರು ಸೇರಿ ಕುತ್ತಿಗೆ, ಕೈಗೆ ಮತ್ತು ಹೊಟ್ಟೆಗೆ ಮನಸೋ ಇಚ್ಚೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ರಕ್ತ ಸ್ರಾವದಿಂದ ಸ್ಥಳದಲ್ಲಿ ಬಿದ್ದು ನರಳಾಡುತ್ತಿದ್ದ ಗಾಯಾಳು ವಿದ್ಯಾರ್ಥಿಯನ್ನು (Injured student) ಶಿಕ್ಷಕರು ಗೋಕಾಕ್ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನು ಓದಿ : ಕೋಣದ DNA ಪರೀಕ್ಷೆಗೆ ಮುಂದಾದ ಕರ್ನಾಟಕ- ಆಂಧ್ರಪ್ರದೇಶ ಗ್ರಾಮಸ್ಥರು ; ಅಂತದ್ದೇನಾಯ್ತು ಗೊತ್ತಾ.?
ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ದೌಡಾಯಿಸಿದ ನಗರ ಪೊಲೀಸ್ ಸಿಬ್ಬಂದಿಗಳು ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.
ಇನ್ನು ಆರೋಪಿಗಳ ಪತ್ತೆಗಾಗಿ ಪೋಲಿಸರು ಬಲೆ ಬೀಸಿದ್ದು, ಘಟನೆಯ ಗೋಕಾಕ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.