ಜನಸ್ಪಂದನ ನ್ಯೂಸ್, ದಾವಣಗೆರೆ : ಈ ವರ್ಷ ರಾಜ್ಯದಲ್ಲಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಸದ್ಯ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ದುರಂತವೊಂದು ಸಂಭವಿಸಿತ್ತು.
ಇದನ್ನು ಓದಿ : ಹೆಬ್ಬಾವಿಗೆ ಮುತ್ತು ಕೊಡಲು ಹೋದ ಯುವಕ; ಮುಂದೆನಾಯ್ತು ಗೊತ್ತಾ.? Video ನೋಡಿ.
ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ನಡೆದಿತ್ತು.
ಸದ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ಇಂತದ್ದೆ ಅಹಿತಕರ ಘಟನೆ ನಡೆದಿದೆ.
ದಾವಣಗೆರೆಯ ಬೇತೂರು ರಸ್ತೆಯ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : Special news : ಗರ್ಭ ಧರಿಸಿ ಮಕ್ಕಳಿಗೆ ಜನ್ಮ ನೀಡಬಲ್ಲ ಏಕೈಕ ಗಂಡು ಪ್ರಾಣಿ ಯಾವುದು ಗೊತ್ತಾ.?
ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ನಡೆದ ಕೂಡಲೇ ಪೋಲಿಸರು ಕಲ್ಲು ತೂರಾಟ ಮಾಡಿದ ಕಿಡಿಗೇಡಿಗಳನ್ನು ಓಡಿಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.