ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಎಸ್‌ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ (Stone-pelting) ನಡೆಸಿರುವ ಬಗ್ಗೆ ವರದಿಯಾಗಿದ್ದು, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತನಿಖೆ ಆರಂಭಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಕೆಎಸ್‌ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ರೈಲಿಗೆ ರಾತ್ರಿ ರಾಣಿ ಕಮಲಪತಿ (ಹಬೀಬ್‌ಗಂಜ್) ಮತ್ತು ಭೋಪಾಲ್ ನಿಲ್ದಾಣಗಳ ನಡುವೆ ಇದ್ದಾಗ ಯಾರೊ ಕಿಡಿಗೇಡಿಗಳು ಕಲ್ಲು ತೂರಾಟ (Stone-pelting) ನಡೆಸಿದ್ದಾರೆ, ಸುದೈವಶಾತ್ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿ : ಬ್ಲಡ್ ಶುಗರ್ ಸಮಸ್ಯೆಯೇ.? ಕುಡಿಯಿರಿ 1 ಚಮಚ ಈ Fruit ನ ಎಲೆಯ ರಸ.!
ಈ ಘಟನೆ (Stone-pelting) ಸಂಭವಿಸುತ್ತಿರುವ ವೇಳೆ ಓರ್ವ ಪ್ರಯಾಣಿಕ ಊಟ ಮಾಡುತ್ತಿದ್ದಾಗ ಕಿಟಕಿ ಗಾಜು ಒಡೆದು ತನ್ನ ತಟ್ಟೆಯ ಮೇಲೆ ಬಿದ್ದಿದೆ ಎಂದು ಹೇಳಿದ್ದಾರೆ. ಆರ್‌ಪಿಎಫ್ ಭೋಪಾಲ್ ವಿಭಾಗದ ಕಮಾಂಡೆಂಟ್ ಪ್ರಶಾಂತ್ ಯಾದವ್ “B-4 ಕೋಚ್‌ನಲ್ಲಿ ಸೀಟ್ ಸಂಖ್ಯೆ 41 ರಲ್ಲಿದ್ದ ದೀಪಕ್ ಕುಮಾರ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ” ಎಂದಿದ್ದಾರೆ.
ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ “ರಾತ್ರಿ 10.30 ರ ಸುಮಾರಿಗೆ ಕಲ್ಲು ತೂರಾಟ (Stone-pelting) ನಡೆಸಲಾಗಿದ್ದು, ರಾತ್ರಿ 10.42 ಕ್ಕೆ ರೈಲ್ ಮದದ್ ಪೋರ್ಟಲ್ ಮೂಲಕ ದೂರು ನೀಡಲಾಗಿದೆ. ಸದ್ಯ ತನಿಖೆ ನಡೆಯುತ್ತಿದ್ದು ಒಂದೇರಡು ದಿನಗಳಲ್ಲಿ ಆರೋಪಿತರನ್ನು ಪತ್ತೆ ಮಾಡಲಾಗುವುದೆಂದು ಅವರು ಹೇಳಿದರು.
ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!
ಮಹಾರಾಷ್ಟ್ರದ ಬಿಜೆಪಿ ನಾಯಕ ಚಂದನ್ ಗೋಸ್ವಾಮಿ ದೆಹಲಿಯಿಂದ ಪಿಟಿಐಗೆ ಮಾಹಿತಿ ನೀಡುತ್ತಾ, ಬಿ-4 ಕೋಚ್‌ನ ಸೀಟ್ ಸಂಖ್ಯೆ 9 ರಲ್ಲಿ ಕುಳಿತಿರುವುದಾಗಿ ಮತ್ತು ಈ ಕೋಚ್ ಗುರಿಯಾಗಿಸಿಕೊಂಡರು ಕಲ್ಲು ತೂರಾಟ (Stone-pelting) ಮಾಡಲಾಗಿದೆ. “ಅದೃಷ್ಟವಶಾತ್, ಕಲ್ಲುಗಳು ಕಿಟಕಿಯ ಗಾಜಿನ ಕೆಳಗೆ ತಗುಲಿ ನಾನು ತಪ್ಪಿಸಿಕೊಂಡೆ” ಎಂದು ಗೋಸ್ವಾಮಿ ಹೇಳಿದ್ದಾರೆ.
ಇಂತಹ (Stone-pelting) ವಿಧ್ವಂಸಕರನ್ನು ತಕ್ಷಣವೇ ಬಂಧಿಸಬೇಕು, ಭವಿಷ್ಯದಲ್ಲಿ ಇಂತಹ (Stone-pelting) ಘಟನೆಗಳು ಮತ್ತೆ ಸಂಭವಿಸದಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಎಂದು ಅವರು ಆಗ್ರಹಿಸಿದ್ದಾರೆ. ನಂತರ ರೈಲಿನ ಒಡೆದ ಕಿಟಕಿ ಗಾಜನ್ನು ಬದಲಾಯಿಸಿದೆ ಎಂದು ತಿಳಿದು ಬಂದಿದೆ.
Astrology : ಹೇಗಿದೆ ಗೊತ್ತಾ.? ಜೂನ 22 ರ ದ್ವಾದಶ ರಾಶಿಗಳ ಫಲಾಫಲ.!
ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 22 ರ ರವಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*
ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಹಣಕಾಸಿನ ಫಲಿತಾಂಶಗಳು ನಿರೀಕ್ಷಿತ ರೀತಿ ಇರುವುದಿಲ್ಲ.
*ವೃಷಭ ರಾಶಿ*
ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನಗಳನ್ನು ಪಡೆಯುತ್ತೀರಿ.
*ಮಿಥುನ ರಾಶಿ*
ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ . ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.
*ಕಟಕ ರಾಶಿ*
ವೃತ್ತಿಗಳು ಹೆಚ್ಚು ನಿರುತ್ಸಾಹಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಇದನ್ನು ಓದಿ : ಯುವಕನಿಗೆ ಕಚ್ಚಿದ 5 ನಿಮಿಷದಲ್ಲಿಯೇ ನೆಗೆದುಬಿದ್ದ ವಿಷಕಾರಿ Sneck.!
*ಸಿಂಹ ರಾಶಿ*
ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಭಿಪ್ರಾಯಗಳು ಇರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚಿದ ಜವಾಬ್ದಾರಿಗಳಿಂದಾಗಿ, ಒಬ್ಬರು ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
*ಕನ್ಯಾ ರಾಶಿ*
ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ, ಸಂಸ್ಕಾರ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡವನ್ನು ನಿವಾರಿಸುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಹೊಂದುತ್ತೀರಿ.
*ತುಲಾ ರಾಶಿ*
ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.
*ವೃಶ್ಚಿಕ ರಾಶಿ*
ಆದಾಯ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳು ಇದ್ದರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತೀರಿ.
*ಧನುಸ್ಸು ರಾಶಿ*
ಸಹೋದರರೊಂದಿಗೆ ತೀವ್ರ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತದೆ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಸೂಕ್ತ.
ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!
*ಮಕರ ರಾಶಿ*
ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ದ ದೊರೆಯುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ.
*ಕುಂಭ ರಾಶಿ*
ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಭೂಮಿ ಮಾರಾಟವು ಅನುಕೂಲಕರವಾಗಿರುತ್ತದೆ. ವ್ಯಾಪಾರಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.
*ಮೀನ ರಾಶಿ*
ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳು ಸಹೋದ್ಯೋಗಿಗಳೊಂದಿಗೆ ವಿವಾದಗಳನ್ನು ಹೊಂದಿರುತ್ತಾರೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.
Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.