Sunday, February 25, 2024
spot_img
spot_img
spot_img
spot_img
spot_img

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದಾದ ಅನ್ಯಾಯದ ವಿರುದ್ಧ ಹೋರಾಟ, ರಾಜಕೀಯ ಚಳವಳಿ ಅಲ್ಲ : ಸಿಎಂ ಸಿದ್ದರಾಮಯ್ಯ.!

ಜನಸ್ಪಂದನ ನ್ಯೂಸ್ಡೆಸ್ಕ್‌ : ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್​ ಮಂತರ್​​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ‘ಛಲೋ ದೆಹಲಿ’ ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,  ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ. 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಫೆ. 7 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಕರ್ನಾಟಕದಲ್ಲಿ ಬರಗಾಲ ಇದೆ. ಐದು ತಿಂಗಳಾದರೂ ಕೇಂದ್ರ ಸರ್ಕಾರ ಇದುವರೆಗೂ ಹಣ ನೀಡಿಲ್ಲ. ನಮ್ಮ ಸಚಿವರು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಭೇಟಿಯಾದರು.

ನಾನೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಆಗ ಅಮಿತ್ ಶಾ, ಡಿಸೆಂಬರ್ 23 ರಂದು ಸಭೆ ಕರೆದು ನಿರ್ಧಾರ ತೆಗೆದುಕೊಳ್ತೀನಿ ಅಂದರು. ಆದರೆ ಏನೂ ಮಾಡಿಲ್ಲ ಎಂದರು.  (ಎಜೇನ್ಸಿಸ್)

spot_img
- Advertisment -spot_img