ಜನಸ್ಪಂದನ ನ್ಯೂಸ್, ಡೆಸ್ಕ್ : ಶಾಲಾ ವಿದ್ಯಾರ್ಥಿನಿಯೋರ್ವಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸಿದ ಘಟನೆ ನಡೆದಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಯುವಕ ಕೆಲ ದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಹೀಗಾಗಿ ಕೋಪಗೊಂಡ ವಿದ್ಯಾರ್ಥಿನಿ ನಡು ರಸ್ತೆಯಲ್ಲೇ ಯುವಕನನ್ನು ಥಳಿಸಿದ್ದಾಳೆ.
ಇದನ್ನು ಓದಿ : Video : ಹೋಟೆಲ್‌ನಲ್ಲಿ ಇಬ್ಬರು ಯುವತಿಯರ ಜೊತೆ ಪತಿಯ ಸರಸ; ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ.!
ಈ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ವೈರಲ್ ವಿಡಿಯೋದಲ್ಲಿರುವ ದೃಶ್ಯ :
ವೈರಲ್ ವಿಡಿಯೋದಲ್ಲಿ ಯುವಕ ನಡು ರಸ್ತೆಯಲ್ಲಿ ಕೆಳಗೆ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ ಮುಂದೆ ಆತನ ನೀಚತನವನ್ನು ಬಯಲಿಗೆಳೆಯುತ್ತಿದ್ದಾಳೆ. ಇದೀಗ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
@gharkekalesh ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಗಸ್ಟ್ 15ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 2.2 ಮಿಲಿಯನ್ ಕ್ಕಿಂತ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಇದನ್ನು ಓದಿ : ಶಾಲೆಯಲ್ಲಿ ವಿಡಿಯೋ ಮಾಡುತ್ತಿದ್ದ ಶಿಕ್ಷಕಿ ; ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ಹೊಡೆದಾಟದ ವಿಡಿಯೋ Viral.!
ಲೈಂಗಿಕ ಕಿರುಕುಳ ನೀಡುವವರನ್ನು ಇದೇ ರೀತಿ ನಡು ರಸ್ತೆಯಲ್ಲೇ ಅವಮಾನಿಸಬೇಕು, ಮಹಿಳೆಯರು ಯಾವತ್ತೂ ಮಾನ ಮರ್ಯಾದೆಗೆ ಅಂಜಿ ಹಿಂಜರಿಯಬಾರದು ಎಂದು ನೆಟ್ಟಿಗರೊಬ್ಬರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
Female students confronted the harasser and beat him up with belts on Road in Ahmedabad
pic.twitter.com/pRoAH0Oi3w— Ghar Ke Kalesh (@gharkekalesh) August 15, 2024