ಜನಸ್ಪಂದನ ನ್ಯೂಸ್, ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ವಿದ್ಯಾರ್ಥಿಯೋರ್ವ ಎಂದಿನಂತೆ ಶಾಲೆಗೆ ತೆರಳಿದ್ದ ವೇಳೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ.
ಇದನ್ನು ಓದಿ : ಯೂಟ್ಯೂಬ್ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?
ತಕ್ಷಣ ಶಿಕ್ಷಕರು ವಿದ್ಯಾರ್ಥಿ ತರುಣ್ ನನ್ನು ಸಿರಿವಾರ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ವಿಚಾರ ತಿಳಿದು ತರುಣ್ ಪೋಷಕರು ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ವೈದ್ಯರು ತರುಣ್ಗೆ ಲೋ ಬಿಪಿ ಆಗಿದೆ ಅಂತ ಹೇಳಿದ್ದಾರೆ.
ಬಳಿಕ, ವೈದ್ಯರು ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ತರುಣ್ನನ್ನು ರಾಯಚೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆ ತರುಣ್ ಕೊನೆಯುಸಿರೆಳಿದಿದ್ದಾನೆ.
ಇದನ್ನು ಓದಿ : ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕಿ Arrest; ಓರ್ವ ಯುವತಿ ರಕ್ಷಣೆ.!
ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಹೃದಯ ಸಂಬಂಧಿ ಸಮಸ್ಯೆಯಿಂದ ಸಾವಾಗಿದೆ ಎಂದು ಪೋಷಕರಿಗೆ ತಿಳಿಸಿದ್ದಾರೆ.
ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.