Saturday, July 27, 2024
spot_img
spot_img
spot_img
spot_img
spot_img
spot_img

Lokayukta trap : ಲಂಚ ಪಡೆಯುವಾಗ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ.!

spot_img

ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನ ಕುವೆಂಪು ನಗರ ಠಾಣೆಯ ಮಹಿಳಾ ಸಬ್ ಇನ್ಸ್‌ಪೆಕ್ಟರ್ (Sub inspector) ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಕುವೆಂಪು ನಗರ ಠಾಣೆಯ ಮಹಿಳಾ ಸಬ್ ಇನ್ಸ್‌ಪೆಕ್ಟರ್ ರಾಧಾ ಅವರು ಲೋಕಾಯುಕ್ತ (Lokayukta) ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿ : ಬ್ರೇಕಪ್ ಮಾಡ್ಕೊಂಡ ಯುವತಿ ; ಖರ್ಚು ಮಾಡಿದ ಹಣ ಪಾವತಿಸುವಂತೆ ಬಿಲ್ ಕಳುಹಿಸಿದ lover.!

ಕ್ರಿಮಿನಲ್ ಕೇಸ್ (criminal case) ಒಂದರ ಸಂಬಂಧ ಕುವೆಂಪುನಗರದ ವ್ಯಕ್ತಿಯಿಂದ 25000 ರೂ ಹಣ ಪಡೆಯುತ್ತಿದ್ದರು.

ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರಾಧಾ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಕ್ರಿಮಿನಲ್ ಕೇಸ್ ಸಂಬಂಧ 50 ಸಾವಿರ ರೂ. ನೀಡುವಂತೆ ರಾಧಾ ವ್ಯಕ್ತಿಯನ್ನು ಒತ್ತಾಯಿಸಿದ್ದರು. ಈ ಸಂಬಂಧ ವ್ಯಕ್ತಿ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಇದನ್ನು ಓದಿ : RTO : ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ.!

ದೂರಿನ ಹಿನ್ನೆಲೆ ಗುರುವಾರ 25000 ರೂ. ನೀಡುವಾಗಲೇ ಮೈಸೂರು ಲೋಕಾಯುಕ್ತ ಎಸ್ ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ‌ ಮೈಸೂರು ಚಾಮರಾಜನಗರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರಾಧಾ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಇನ್ನೂ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

 

spot_img
spot_img
- Advertisment -spot_img