Friday, October 18, 2024
spot_img
spot_img
spot_img
spot_img
spot_img
spot_img
spot_img

ಹೃದಯಾಘಾತದಿಂದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ  (67) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 67 ವರ್ಷವಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಿದ್ದಾರೆ. ಅವರಿಗೆ ರಾಜಾ ವೇಣುಗೋಪಾಲ ನಾಯಕ, ರಾಜಾ ಸಂತೋಷ ನಾಯಕ ಇಬ್ಬರು ಪುತ್ರರಿದ್ದಾರೆ.

ರಾಜಕೀಯ ಪಕ್ಷಕ್ಕೂ ಮಾನ ಇದೆ ಎಂದ High-court ; ಏನಿದು ಕೇಸ್.?

ರಾಜಾ ವೆಂಕಟಪ್ಪ ನಾಯಕ ಅವರು ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು.

ಸುರಪುರ ವಿಧಾನಸಭೆ ಕ್ಷೇತ್ರದ ಎಸ್.ಟಿ ಮೀಸಲು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ರಾಜಾ ವೆಂಕಟಪ್ಪ ನಾಯಕ. ಅವರು ಕಾಂಗ್ರೆಸ್ ಪಕ್ಷದಿಂದಲೇ ಪ್ರತಿ ಬಾರಿ ಗೆದ್ದಿದ್ದಾರೆ. 1994, 1999, 2013, 2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ದಿನಾಂಕ ಪ್ರಕಟ.!

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ನಾಯಕ ಅವರು ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪಕ್ಷ ಕಟ್ಟಲು ಶಕ್ತಿ ಮೀರಿ ಶ್ರಮಿಸಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಆಸ್ಪತ್ರೆಗೆ ತೆರಳಲಿದ್ದಾರೆ. ಸೋಮವಾರ (ಫೆ. 26) ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img