ಜನಸ್ಪಂದನ ನ್ಯೂಸ್, ಡೆಸ್ಕ್ : ಒಡಿಶಾದ ಬಾಲಸೋರ್ ಜಿಲ್ಲೆಯ (Balasore district of Odisha) ರೆಮುನಾ ಪ್ರದೇಶದಲ್ಲಿ ಧಾರ್ಮಿಕ ಮತಾಂತರದ (Religious conversion) ಶಂಕೆಯ ಮೇಲೆ ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬಳಿಕ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು (Separate cases) ದಾಖಲಿಸಿದ್ದಾರೆ.
ಖರಿಮುಖ ಗ್ರಾಮದ ಜನರ ಬಳಿ ಇಬ್ಬರು ಬುಡಕಟ್ಟು ಮಹಿಳೆಯರು (Tribal women) ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಿ ಎಂದು ಮನವೊಲಿಸಲು ಹೋಗಿದ್ದರು.
ಇದನ್ನು ಓದಿ : Special news : ಚಳಿಗಾಲದಲ್ಲಿ ನಿಮ್ಮ ಮುಖಕ್ಕೆ ಅಪ್ಪಿತಪ್ಪಿಯೂ ಇವುಗಳನ್ನು ಹಚ್ಚಿಕೊಳ್ಳಬೇಡಿ.!
ಈ ವಿಚಾರ ಇಡೀ ಗ್ರಾಮದಲ್ಲಿ ಹಬ್ಬಿದ್ದು, ಹಿಂದೂ ಸಂಘಟನೆಯ ಸದಸ್ಯರು (Members of the Hindu organization) ಮತ್ತು ಸ್ಥಳೀಯರನ್ನು ಒಳಗೊಂಡ ಗುಂಪೊಂದು ಸ್ಥಳಕ್ಕೆ ಭೇಟಿ ನೀಡಿ ಇಬ್ಬರು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದೆ ಎಂದು ರೆಮುನಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ (ಒಐಸಿ) ಸುಭಾಷ್ ಚಂದ್ರ ಮಲ್ಲಿಕ್ TNIE ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಮಹಿಳೆಯರ ಮುಖವನ್ನು ವಿರೂಪಗೊಳಿಸಿದ (Facial deformity) ಗುಂಪು, ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿದೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ನೀಲಗಿರಿ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಸ್ಥಳೀಯರನ್ನು ಮತಾಂತರಗೊಳಿಸಲು ಗ್ರಾಮಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ರೆಮುನಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ (Officer-in-charge of the police station) ಸುಭಾಷ್ ಚಂದ್ರ ಮಲ್ಲಿಕ್ ತಿಳಿಸಿದ್ದಾರೆ.
ಇದನ್ನು ಓದಿ : ತೊಡೆ ಮೇಲೆ Girlfriend ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಕಾರು ಚಲಾಯಿಸಿದ ಯುವಕ.!
ದೂರು ಆಧರಿಸಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಒಡಿಶಾ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 1967 ರ ಸೆಕ್ಷನ್ 4 ಮತ್ತು ಬಿಎನ್‌ಎಸ್‌ನ ಸೆಕ್ಷನ್ 299, 3 (5) ಮತ್ತು 351 (2) ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹಿಂದಿನ ಸುದ್ದಿ : ಪ್ರೇಯಸಿಯ ಮನೆ ಮುಂದೆ gelatin ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ.!
ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆ ನಾಗಮಂಗಲ (Nagamangala) ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಯುವಕನೋರ್ವ ಸಾವಿಗೀಡಾದ ಘಟನೆ ನಡೆದಿದೆ.
ನಾಗಮಂಗಲದ ಬಸವೇಶ್ವರ ನಗರದ ರಾಮಚಂದ್ರ ಎಂಬಾತ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ Green signal.!
ಈತ ಕಾಳೇನಹಳ್ಳಿಯ ಅಪ್ರಾಪ್ತೆಯನ್ನು ಪ್ರೀತಿ ಮಾಡುತ್ತಿದ್ದ (Loved the minor). ಕಳೆದ ವರ್ಷ ಈ ಯುವಕ ಮತ್ತು ಅಪ್ರಾಪ್ತೆ ಮನೆ ಬಿಟ್ಟು ಓಡಿ ಹೋಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು (File a case under the POCSO Act).
ರಾತ್ರಿ ಯುವತಿ ಮನೆ ಬಳಿ ಹೋದ ಯುವಕ, ಬಂಡೆಗಳನ್ನ ಸಿಡಿಸುವ ಜಿಲೆಟಿನ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಜಿಲೆಟಿನ್ ಸಿಡಿದ ಪರಿಣಾಮ ಯುವಕನ ದೇಹ ಛಿಧ್ರಗೊಂಡಿದೆ (Body piercing).
ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ (Nagamangala Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.