ಜನಸ್ಪಂದನ ನ್ಯೂಸ್, ಯಾದಗಿರಿ : ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.
ಇದನ್ನು ಓದಿ : ಇಂದಿನಿಂದ FASTag ನಿಯಮದಲ್ಲಿ ಬದಲಾವಣೆ ; ಹಳೆ ಫಾಸ್ಟ್ ಟ್ಯಾಗ್ ಹೊಂದಿದವರು ಹೀಗೆ ಮಾಡಿ.!
ಇನ್ನೂ ಪಿಎಸ್‌ಐ ಪರಶುರಾಮ್ ಅವರು ಸೈಬರ್ ಕ್ರೈಂ ಪಿಎಸ್‌ಐ ಆಗಿ ವರ್ಗಾವಣೆಗೊಂಡಿದ್ದರು. ಹೀಗಾಗಿ ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು.
ಪಿಎಸ್‌ಐ ಪರಶುರಾಮ ಸಾವಿನ ಸುತ್ತ ಹತ್ತು ಹಲವು ಅನುಮಾನಗಳು ಶುರುವಾಗಿದ್ದು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಅಷ್ಟೇ ಅಲ್ಲದೇ ಪರಶುರಾಮ್ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನು ಓದಿ : ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಅಲ್ಲದೇ ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಬೇಡಿಕೆ ಇಟ್ಟಿದ್ದರು. ಈಗ ನಿಯಮ ಬಾಹಿರವಾಗಿ ಅವರನ್ನು ವರ್ಗಾವಣೆ ಮಾಡಿದ್ದರಿಂದ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಭಾರೀ ಒತ್ತಡದಿಂದ ಅವರಿಗೆ ಹೃದಯಾಘಾತವಾಗಿದೆ.
ಪರಶುರಾಮ್ ಅವರ ಜಾಗಕ್ಕೆ ಇನ್ನೊಬ್ಬರು ಬಂದರೂ ವರ್ಗಾವಣೆ ಪಟ್ಟಿಯಲ್ಲಿ ಪರಶುರಾಮ್ ಹೆಸರೇ ಇರಲಿಲ್ಲ. ಈಗ ಹೊಸದಾಗಿ ಬಂದವರು ಹಣ ನೀಡಿಯೇ ಬಂದಿದ್ದಾರೆ ಎಂದು ಮೃತ ಪಿಎಸ್‌ಐ ಮಾವ ವೆಂಕಟಸ್ವಾಮಿ ಮತ್ತು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪರಶುರಾಮ್ ಅವರು ಪಿಎಸ್‌ಐ ಹುದ್ದೆ ಪಡೆಯಲು 30 ಲಕ್ಷ ರೂ. ನೀಡಿದ್ದರು. ಈ ಹುದ್ದೆ ಪಡೆಯಲು ಬಹಳ ಸಾಲ ಮಾಡಿದ್ದರು. ಈಗ ಮತ್ತೆ ನಿಯಮಬಾಹಿರವಾಗಿ ಒಂದು ವರ್ಷ ಪೂರೈಸುವ ಮುನ್ನವೇ ಅವರನ್ನು ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿದ್ದರಿಂದ ಖಿನ್ನತೆಗೆ ಜಾರಿದ್ದರು. ಈ ಕಾರಣದಿಂದ ಹೃದಯಾಘಾತವಾಗಿ ಮೃತಪಟ್ಟಿರಬಹುದು ಎಂಬ ಮಾತು ಕೇಳಿ ಬರುತ್ತಿದೆ.