Sunday, September 15, 2024
spot_img
spot_img
spot_img
spot_img
spot_img
spot_img
spot_img

ಶಾಲೆಯಲ್ಲಿ ವಿಡಿಯೋ ಮಾಡುತ್ತಿದ್ದ ಶಿಕ್ಷಕಿ ; ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ಹೊಡೆದಾಟದ ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾನ್ಯವಾಗಿ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ, ಗಲಾಟೆ, ಹೊಡೆದಾಟಗಳು ನಡೆಯುವುದು ಸಹಜ. ಆದರೆ ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೇ ಹೊಡೆದಾಡಿಕೊಂಡ ಘಟನೆ ನಡೆದಿರುವುದಾಗಿ ಬೆಳಕಿಗೆ ಬಂದಿದೆ.

ರಾಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮ್ಹಾರ್ನ್ ಪೂರ್ವಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ; ಇಲ್ಲಿದೆ ಡೈರೆಕ್ಟ್ link.!

ಪ್ರಾಥಮಿಕ ತನಿಖೆಯಲ್ಲಿ ಮಹಿಳಾ ಶಿಕ್ಷಕಿ ಶಾಲೆಯಲ್ಲಿ ವಿಡಿಯೋಗಳನ್ನು ಮಾಡುತ್ತಿದ್ದರು. ಇದರಿಂದಾಗಿ ಇತರ ಶಿಕ್ಷಕರು ಕೋಪಗೊಂಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು ಎಂಬುದಾಗಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಇದನ್ನು ಓದಿ : Special news : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ಮಬಾರದು ಏಕೆ.? ಇಲ್ಲಿದೆ ವೈಜ್ಞಾನಿಕ ಕಾರಣ.

ಶಿಕ್ಷಕಿ ಸಪ್ನಾ ಶುಕ್ಲಾ ಮತ್ತು ಶಿಕ್ಷಕ ಆದೇಶ್ ತಿವಾರಿ ಎಂಬುವವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇವರ ಜಗಳವನ್ನು ರೆಕಾರ್ಡ್ ಮಾಡಲಾಗಿದೆ.

ಶಿಕ್ಷಕರು ಪರಸ್ಪರ ಹೊಡೆದಾಡಿಕೊಳ್ಳುವ ಮೂಲಕ ಗೊಂದಲದ ಪರಿಸ್ಥಿತಿಯನ್ನು ಸೃಷ್ಟಿಮಾಡಿದ್ದಾರೆ. ಈ ಘಟನೆ ಮತ್ತೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ.

ಇದನ್ನು ಓದಿ : Special news : ನಿಮ್ಮ ಬಳಿ 5 ರೂ. ಹಳೆ ನೋಟು ಇದ್ದರೆ ನೀವಾಗಬಹುದು ಲಕ್ಷಾಧಿಪತಿ.!

ಈ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ, ಬ್ಲಾಕ್ ಶಿಕ್ಷಣ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದು ಸುಮಾರು 15 ದಿನಗಳ ಹಿಂದಿನ ವಿಡಿಯೋ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖಾ ವರದಿಯನ್ನು ಶೀಘ್ರದಲ್ಲೇ ಬಿಎಸ್‌ಎಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆಹ್ವಾನ.!

ಶಿಕ್ಷಕರ ಹೊಡೆದಾಟವನ್ನು ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ವಿಡಿಯೋ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಶಿಕ್ಷಕರ ನಡವಳಿಕೆಯ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img