Sunday, September 8, 2024
spot_img
spot_img
spot_img
spot_img
spot_img
spot_img
spot_img

News : ಅಶ್ಲೀಲ ವಿಡಿಯೋ ತೋರಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸರ್ಕಾರಿ ಪ್ರೌಢಶಾಲೆಯ (government high school) 9ನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ (Teacher) ಅಶ್ಲೀಲ ವಿಡಿಯೋ ತೋರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಹಿಮಾಚಲ ಪ್ರದೇಶದ ಧಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನು ಓದಿ : Mafia : ಪೊಲೀಸ್ ಅಧಿಕಾರಿಯ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಪರಾರಿಯಾದ ಚಾಲಕ.!

ರಾಜ್ಯ ರಾಜಧಾನಿ ಶಿಮ್ಲಾದಿಂದ (Shimla) ಸುಮಾರು 20 ಕಿಮೀ ದೂರದಲ್ಲಿರುವ ಜುಂಗಾ ಎಂಬಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಮೇ 2 ರಂದು ಸರ್ಕಾರಿ ಪ್ರೌಢಶಾಲೆಯ ಡ್ರಾಯಿಂಗ್ ಶಿಕ್ಷಕ ಶಾಲೆಯಲ್ಲಿ ಬಲವಂತವಾಗಿ (by force) ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿದ್ದಾನೆ.

ಅಲ್ಲದೇ ಅನುಚಿತವಾಗಿ ವಿದ್ಯಾರ್ಥಿನಿಯನ್ನು ಸ್ಪರ್ಶಿಸಿದ್ದಾನೆ (touch) ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Video : ದಿಢೀರ್ ಅಂತ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ಮಾಜಿ ಪ್ರಿಯತಮ ; ಶಾಕ್ ಆದ ವಧು ; ಮುಂದೆ.?

ಸದ್ಯ ಆರೋಪಿ ಶಿಕ್ಷಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಮಾನಭಂಗಕ್ಕೆ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 10 ಮತ್ತು 12ರ ಅಡಿಯಲ್ಲಿ ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಯತ್ನದ ಪ್ರಕರಣ ದಾಖಲಾಗಿದೆ.

ಆರೋಪಿಯ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img