Wednesday, May 22, 2024
spot_img
spot_img
spot_img
spot_img
spot_img
spot_img

News : ಭೀಕರ ರಸ್ತೆ ಅಪಘಾತ : 10 ಜನರ ಸಾ**ವು.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಭೀಕರ ರಸ್ತೆ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ಇಂದು ಬೆಳಿಗ್ಗೆ ಮಹಾರಾಷ್ಟ್ರದ ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ (highway) ನಡೆದಿದೆ ಎಂದು ವರದಿಯಾಗಿದೆ.

ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿ : Health : ಬೇಗ ನಿದ್ದೆ ಬರಬೇಕಾ? ಮಲಗುವ ಮುಂಚೆ ಇವುಗಳಲ್ಲಿ ಯಾವುದಾದರೊಂದು ತಿನ್ನಿ.

ಬಸ್ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತ ತುಂಬಾ ಭಯಾನಕವಾಗಿತ್ತು (terrible) ಎಂದು ವರದಿಯಿಂದ ತಿಳಿದು ಬಂದಿದೆ.

ಇನ್ನೂ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ (With the help of) ಗಾಯಾಳುಗಳು ಹಾಗೂ ಮೃತರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಅಪಘಾತಕ್ಕೆ ಟೈರ್ ಸ್ಫೋಟವೇ (tire blast) ಕಾರಣ ಎನ್ನಲಾಗಿದೆ. ಇದರಿಂದ ಚಾಲಕನಿಗೆ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ.

ಇದನ್ನು ಓದಿ : ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿಯ ಪ್ರಾಣ ರಕ್ಷಿಸಿದ ಮಹಿಳಾ Constable ; ರೋಚಕ ವಿಡಿಯೋ ವೈರಲ್‌.

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ (postmortem examination) ಕಳುಹಿಸಲಾಗಿದೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ನಂತರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್​​​​​ ಉಂಟಾಗಿತ್ತು. ಮಾಹಿತಿ ಪ್ರಕಾರ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಘಟನೆಯಿಂದ ಬಸ್​​​​ ಒಂದು ಪಲ್ಟಿಯಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

spot_img
spot_img
spot_img
- Advertisment -spot_img