Friday, June 14, 2024
spot_img
spot_img
spot_img
spot_img
spot_img
spot_img

Accident : ಭೀಕರ ರಸ್ತೆ ಅಪಘಾತ ; 6 ಜನರು ಸ್ಥಳದಲ್ಲೇ ಸಾವು.!

spot_img

ಜನಸ್ಪಂದನ ನ್ಯೂಸ್, ಹಾಸನ : ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ (national highway) 75ರ ಕಂದಲಿ ಬಳಿ ಟೊಯೋಟಾ ಇಟಿಯೋಸ್ ಕಾರು ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಇದನ್ನು ಓದಿ : Health : ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ.?

ಇವರೆಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ (Hosakote) ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎನ್ನಲಾಗಿದೆ.

ಮಂಗಳೂರಿನಲ್ಲಿ ಚಿಕಿತ್ಸೆ (treatment) ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು KA-53-C1419 ನಂಬರ್‌ನ ಇಟಿಯೋಸ್ ಕಾರಿನಲ್ಲಿ ತೆರಳಿದ್ದರು.

ಇನ್ನೂ ವಾಪಸ್ಸಾಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ.

ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್‌ಗೆ ಗುದ್ದಿದೆ ಎನ್ನಲಾಗಿದೆ.

ಇದನ್ನು ಓದಿ : ಮೊಬೈಲ್ ಚಾರ್ಜ್ ಬೇಗನೆ ಖಾಲಿಯಾಗ್ತಿದೆಯಾ? ಈ ರೀತಿ ಸೆಟ್ಟಿಂಗ್ಸ್ ಚೇಂಜ್ ಮಾಡಿ.!

ಇನ್ನೂ ಪೊಲೀಸರು ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು (dead bodies) ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.

ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Hasan rural police station) ಪ್ರಕರಣ ದಾಖಲಾಗಿದೆ.

spot_img
spot_img
- Advertisment -spot_img