Sunday, September 15, 2024
spot_img
spot_img
spot_img
spot_img
spot_img
spot_img
spot_img

Accident : ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ 7 ಜನರು ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಟೂರಿಸ್ಟ್ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 7 ಜನ ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡ ದುರ್ಘಟನೆ ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಇದನ್ನು ಓದಿ : ಶಿಕ್ಷಕಿಯ ಜೊತೆ ಶಿಕ್ಷಕನ ಲವ್ವಿಡವ್ವಿ ; ಬೆತ್ತಲೆಯಿದ್ದಾಗಲೇ red ಹ್ಯಾಂಡ್ಆಗಿ ಹಿಡಿದ ಶಿಕ್ಷಕನ ಹೆಂಡ್ತಿ.!

ಖಾಸಗಿ ಬಸ್ ಚೆನ್ನೈನಿಂದ (Chennai) ಹೈದರಾಬಾದ್​ಗೆ ಬರುತ್ತಿತ್ತು. ನೆಲ್ಲೂರು ಬಳಿ ಮೊದಲು ಟ್ರಕ್​ವೊಂದು ನಿಂತಿದ್ದ ರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬಸ್​ ಮಧ್ಯೆ ಅಪಘಾತ ಸಂಭವಿಸಿತ್ತು.

ಟೋಲ್‌ ಪ್ಲಾಜಾ ಬಳಿ ಲಾರಿಯೊಂದು ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ (dash) ಹೊಡೆದಿದೆ. ಇದಾಗುತ್ತಿದ್ದಂತೆ ಇದೇ ವೇಳೆ ಬಂದ ಬಸ್‌ ಒಂದು ಎರಡೂ ಲಾರಿಗಳನ್ನು ಗುದ್ದಿದೆ. ಪರಿಣಾಮವಾಗಿ, ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು (natives) ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹೈವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು.

ಇದನ್ನು ಓದಿ : Hit & Run Case : ಮತ್ತೊಂದು ಹಿಟ್‌ & ರನ್‌ ಕೇಸ್ ; ಭಯಾನಕ ವಿಡಿಯೋ ವೈರಲ್.!

ಗಾಯಾಳುಗಳನ್ನು ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲಿಸಿದರು. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು (officer’s) ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img