Thursday, June 20, 2024
spot_img
spot_img
spot_img
spot_img
spot_img
spot_img

Accident : ಭೀಕರ ರಸ್ತೆ ಅಪಘಾತ ; ನಾಲ್ವರ ಸಾವು.!

spot_img

ಜನಸ್ಪಂದನ ನ್ಯೂಸ್, ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ (Kustagi) ತಾಲ್ಲೂಕಿನ ಹೊಸಳ್ಳಿ ಗ್ರಾಮದ ಬಳಿ ಬಸ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ.

ಮೃತರು ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮದುವೆ ಮಂಟಪದಲ್ಲೇ WWE ; ಯುವಕನಿಗೋಸ್ಕರ ಇಬ್ಬರು ಯುವತಿಯರ ನಡುವೆ ಮಾರಾಮಾರಿ ; ವಿಡಿಯೋ ವೈರಲ್.!

ಇವರು ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ತೆರಳಿ, ಯಲಬುರ್ಗಾ ತಾಲ್ಲೂಕಿನ ಕರಮುಡಿ ಗ್ರಾಮಕ್ಕೆ ವಾಪಸ್‌ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಖಾಸಗಿ ಬಸ್ (private bus) ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಜರುಗಿದೆ.

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್‌ ಪಲ್ಟಿಯಾಗಿದ್ದು (flipped) ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ (serious injuries) ಎಂದು ಗೊತ್ತಾಗಿದೆ. ಗಾಯಗೊಂಡವರನ್ನು ತಡರಾತ್ರಿಯ ತನಕ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು.

ಇದನ್ನು ಓದಿ : Fake ನಂಬರ್ ಪ್ಲೇಟ್ ಬಳಸಿ ಶೋಕಿ ಮಾಡುತ್ತಿದ್ದ IPS ಅಧಿಕಾರಿ ; ಮುಂದೆನಾಯ್ತು ಗೊತ್ತಾ.?

ಆಸ್ಪತ್ರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲಿಸಿದರು.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

spot_img
spot_img
- Advertisment -spot_img