ಜನಸ್ಪಂದನ ನ್ಯೂಸ್, ಕೊಣ್ಣೂರ : ಸಾರಿಗೆ ಬಸ್- ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಕೊಣ್ಣೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಇದನ್ನು ಓದಿ : ವಿದ್ಯಾಭ್ಯಾಸದಲ್ಲಿ ಹಿನ್ನಡೆ : ಮಕ್ಕಳ ಮೊಬೈಲ್ ಒಡೆದು ಪುಡಿ ಮಾಡಿದ ಪೋಷಕರು ; ವಿಡಿಯೋ viral.!
ಮೃತಪಟ್ಟವರು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ (12) ಎಂದು ತಿಳಿದು ಬಂದಿದೆ.
ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ.
ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ.
ಇದನ್ನು ಓದಿ : Special news : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ಮಬಾರದು ಏಕೆ.? ಇಲ್ಲಿದೆ ವೈಜ್ಞಾನಿಕ ಕಾರಣ.
ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.