Thursday, September 19, 2024
spot_img
spot_img
spot_img
spot_img
spot_img
spot_img
spot_img

ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಕೋಲಾರ : ಕೋಲಾರ ನಗರದ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರದ ಸಮೀಪ ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪಾರಾದ ಘಟನೆ ನಡೆದಿದೆ.

ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮೃತರು ಬಳ್ಳಾರಿ ಮೂಲದ‌ ಬಸವರಾಜ್, ಹಾಸನ ಮೂಲದ ಹರ್ಷವರ್ಧನ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ತಿಳಿದು ಬಂದಿದೆ.

ಇನ್ನೂ ಅಪಘಾತದಲ್ಲಿ ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದಾರೆ.

ಈ ನಾಲ್ವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಇದನ್ನು ಓದಿ : ಇಂದಿನಿಂದ FASTag ನಿಯಮದಲ್ಲಿ ಬದಲಾವಣೆ ; ಹಳೆ ಫಾಸ್ಟ್ ಟ್ಯಾಗ್ ಹೊಂದಿದವರು ಹೀಗೆ ಮಾಡಿ.!

ಅಪಘಾತದ ರಭಸಕ್ಕೆ ಆಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸಾಯಿ ಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img