ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ದಂಡುಪಾಳ್ಯ ಗೇಟ್ ಸಮೀಪ ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ (ಆಗಸ್ಟ್ 28) ನಡೆದಿದೆ.
ಇದನ್ನು ಓದಿ : ಸೀಮಂತದ ದಿನವೇ ಪತ್ನಿಯ ಅನೈತಿಕ ಸಂಬಂಧದ ವಿಡಿಯೋ ಅತಿಥಿಗಳ ಮುಂದೆ Leak ಮಾಡಿದ ಪತಿ.!
ಸಾವನ್ನಪ್ಪಿದವರು ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು, ಟಿಟಿ ವಾಹನ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿತ್ತು.
ಇದನ್ನು ಓದಿ : ಬಿಎಸ್ಎನ್ಎಲ್ ಗ್ರಾಹಕರಿಗೆ ಗುಡ್ ನ್ಯೂಸ್ : ʼಬಿಎಸ್ಎನ್ಎಲ್ʼನಿಂದ 4G ಸೇವೆ ಆರಂಭ ; ಎಂದಿನಿಂದ ಗೊತ್ತೇ.?
ಈ ವೇಳೆ 2 ವಾಹನಗಳ ನಡುವೆ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇನ್ನು ಟಿಟಿ ವಾಹನದಲ್ಲಿದ್ದ 12 ಮಂದಿಗೆ ಗಂಭೀರ ಗಾಯಗಳಾಗಿದ್ದು, ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಷಯ ತಿಳಿದ ತಕ್ಷಣ ಎಸ್ ಪಿ ಕುಶಾಲ್ ಚೌಕ್ಸೆ, ಎಎಸ್ಪಿ ಖಾಸಿಂ ರಜ, ಡಿವೈಎಸ್ಪಿ ಮುರಳೀಧರ, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.