Tuesday, September 17, 2024
spot_img
spot_img
spot_img
spot_img
spot_img
spot_img
spot_img

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್ಬೆಂಗಳೂರು : ನಿಗದಿತ ರಾಷ್ಟ್ರೀಯ ಹಬ್ಬ (National festival), ನಾಡಹಬ್ಬವನ್ನು ಮಾತ್ರ ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದ ಬೆನ್ನಲೇ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಇದೀಗ ತನ್ನ ನಿರ್ಬಂಧ ಆದೇಶವನ್ನು ವಾಪಸ್ ಪಡೆದಿದೆ.

ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು (Karnataka Residential Educational Institutions Society) ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಇದೀಗ ತನ್ನ ನಿರ್ಬಂಧ ಆದೇಶವನ್ನು ವಾಪಸ್ ಪಡೆದಿದೆ.

ಇದನ್ನು ಓದಿ : Lokayukta : ಸಹಿ ಹಾಕಲು ಲಂಚಕ್ಕೆ ಬೇಡಿಕೆ ; ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆಗೆ.!

ಹಿಂದೂ ಪರ ಹೋರಾಟಗಾರ ಮೋಹನಗೌಡ ಅವರು ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಹಿಂದೂ ವಿದ್ಯಾರ್ಥಿಗಳಲ್ಲಿ ನಾಸ್ತಿಕ ಮನೋಭಾವ ಮೂಡಿಸುವ ಕೆಲಸವಾಗುತ್ತಿದೆ ಎಂದು ಕಿರಿಕಾರಿದ್ದರು. ವಿರೋಧ ತಾರಕಕ್ಕೇರುತ್ತಿದ್ದಂತೆಯೇ ಎಚ್ಚೆತ್ತ ಸರ್ಕಾರ ಸುತ್ತೋಲೆಯನ್ನು ವಾಪಸ್ ಪಡೆದುಕೊಂಡಿದೆ.

ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ಈ ಕೆಳಕಾಣಿಸಿದ ಹಬ್ಬಗಳನ್ನು ಮಾತ್ರ ಾಚರಿಸಲು ಆದೇಶಿಸಿತ್ತು.

1) ಗಣರಾಜ್ಯೋತ್ಸವ.

2) ಸ್ವಾತಂತ್ರ್ಯ ದಿನಾಚರಣೆ

3) ಗಾಂಧಿ ಜಯಂತಿ

4) ಕನ್ನಡ ರಾಜ್ಯೋತ್ಸವ.

5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ.

6) ವಾಲ್ಮೀಕಿ ಜಯಂತಿ.

7) ಕನಕದಾಸ ಜಯಂತಿ.

8) ಬಸವ ಜಯಂತಿ.

9) ಸಂವಿಧಾನ ಜಯಂತಿ.

10) ಯೋಗ ದಿನಾಚರಣೆ.

ಇದನ್ನು ಓದಿ : Health : ಶೇಂಗಾವನ್ನು ನೆನಸಿಟ್ಟು ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು. ಆದ್ರೆ, ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ತನ್ನ ಸುತ್ತೋಲೆಯನ್ನು ಇದೀಗ ವಾಪಸ್ ಪಡೆದುಕೊಂಡಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img