ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ (Kittoor Taluk of Belgaum District) ಅಂಬಡಗಟ್ಟಿ ಗ್ರಾಮದ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ (ಜ.14ರಂದು) ಮುಂಜಾನೆ 6 ಗಂಟೆಯ ಸುಮಾರಿಗೆ ನಡೆದಿದೆ.
ನಿನ್ನೆ (ಸೋಮವಾರ) ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಶಾಸಕಾಂಗ ಪಕ್ಷದ ಸಭೆ (Legislative Party Meeting) ಮುಗಿಸಿ ಕಾರಿನಲ್ಲಿ ಬರುತ್ತಿದ್ದರು.
Read it : Canara ಬ್ಯಾಂಕ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!.
ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ (Car out of control) ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಇನ್ನೂ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ.
Read it : ಈ Video ನೋಡಿ ; ನಿಜವಾದ ಮೃಗಗಳು ಯಾರು.?
ಸದ್ಯ ಇಬ್ಬರಿಗೂ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.