Thursday, April 25, 2024
spot_img
spot_img
spot_img
spot_img
spot_img
spot_img

18ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ತೀವ್ರ ಕುತೂಹಲ ಕೆರಳಿಸಿರುವ 18ನೇ ಲೋಕಸಭಾ ಚುನಾವಣೆಗೆ ಶನಿವಾರದಂದು (ದಿ.16) ಕೇಂದ್ರ ಚುನಾವಣಾ ಆಯೋಗ (Central Election Commission)ವು ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.

ಚುನಾವಣಾ ದಿನ ಘೋಷಣೆಯಾದ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಈ ಕ್ಷಣದಿಂದಲೇ ಜಾರಿಗೆ ಬರಲಿದ್ದು, ಚುನಾವಣೆ ಮುಗಿದು ಫಲಿತಾಂಶ ಬರುವವರೆಗೂ ಅಂದರೆ ಸುಮಾರು ಎರಡು ತಿಂಗಳ ಕಾಲ ಈ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

SSC Recruitment : ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಾದ್ಯಂತ ಕೇಂದ್ರ ಚುನಾವಣಾ ಆಯೋಗವು 19 ಏಪ್ರಿಲ್ 2024 ರಿಂದ 01 ಜೂನ 2024 ರವರೆಗೆ ಏಳು ಹಂತಗಳಲ್ಲಿ ಚುನಾವಣೆಗಳನ್ನು ನಡೆಸಲಿದೆ ಮತ್ತು 04 ಜೂನ 2024 ರಂದು ಫಲಿತಾಂಶಗಳನ್ನು ಘೋಷಿಸಲಾಗುವುದು.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎಪ್ರೀಲ್‌ 26 ಮತ್ತು ಮೇ 07 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಹಾಗೂ ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಸಲಾಗುವುದು.

ಒಂದನೇ (ಎಪ್ರೀಲ್‌ 26) ಹಂತದಲ್ಲಿ ಈ ಕ್ಷೇತ್ರಗಳಲಿ ಮತದಾನ ನಡೆಯಲಿದೆ :

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ ಚಿಕ್ಕಮಗಳೂರು.

ಎರಡನೇ (ಮೇ 07) ಹಂತದಲ್ಲಿ ಈ ಕ್ಷೇತ್ರಗಳಲಿ ಮತದಾನ ನಡೆಯಲಿದೆ :

ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ಬಿಜಾಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಗುಲ್ಬರ್ಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ.

ವಿದ್ಯಾರ್ಥಿಗಳಿಗೆ Good News : ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್.!

ಒಟ್ಟು ಮತದಾರರು : 97 ಕೋಟಿ.

ಮಹಿಳಾ ಮತದಾರರು : 47.10 ಕೋಟಿ.

ಪುರುಷ ಮತದಾರರು : 49.70 ಕೋಟಿ.

ಯಾರ ವಯಸ್ಸು 01-04-2024 ಕ್ಕೆ 18 ವರ್ಷ ಪೂರ್ಣಗೊಳ್ಳುತ್ತದೆಯೋ ಅವರಿಗೂ ಸಹ ಮತದಾನದ ಹಕ್ಕು ನೀಡಲಾಗಿದೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ ಕುಮಾರ ಜೊತೆಗೆ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಸೇರಿದಂತೆ ಅನೇಕ ಅಧಿಕಾರಿ ವರ್ಗದವರು ಸುದ್ದಿ ಘೋಷ್ಠಿಯಲ್ಲಿದ್ದರು.

A/C : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವುದು ಒಳ್ಳೆಯದಾ ಅಥವಾ ಕೆಟ್ಟದ್ದಾ.?

ನೀತಿ ಸಂಹಿತೆ ಎಂದರೇನು.?

ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಕೆಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನೀತಿ ಸಂಹಿತೆ ಎಂದು ಕರೆಯಲಾಗುತ್ತದೆ. ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಈ ನಿಯಮಗಳನ್ನು ಪಾಲಿಸುವುದು ಅಗತ್ಯ.

ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ನೀತಿ ಸಂಹಿತೆಯ ಅಡಿಯಲ್ಲಿ ತಿಳಿಸಲಾಗಿದೆ. ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ, ಚುನಾವಣಾ ಆಯೋಗವು ಶಾಂತಿಯುತ ಚುನಾವಣೆಗಳಿಗಾಗಿ ನೀತಿ ಸಂಹಿತೆಯನ್ನು ಅನುಸರಿಸಲು ರಾಜಕೀಯ ಪಕ್ಷಗಳಿಗೆ ಸೂಚನೆ ನೀಡುತ್ತದೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ ಕುಮಾರ ಜೊತೆಗೆ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಸೇರಿದಂತೆ ಅನೇಕ ಅಧಿಕಾರಿಗಳು ಸುದ್ದಿ ಘೋಷ್ಠಿಯಲ್ಲಿದ್ದರು.

spot_img
spot_img
spot_img
- Advertisment -spot_img