Saturday, July 13, 2024
spot_img
spot_img
spot_img
spot_img
spot_img
spot_img

ಮಧ್ಯರಾತ್ರಿ ಮಣ್ಣು ಮಾಡಿದ್ದ ಮಗು ಬೆಳಿಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ ; ಆರಂಕಗೊಂಡ ಜನರು.!

spot_img

ಜನಸ್ಪಂದನ ನ್ಯೂಸ್, ಬೀದರ್ : ರಾತ್ರಿ ವೇಳೆ ಮಣ್ಣಲ್ಲಿ ಹೂತಿದ್ದ ಮಗು ಬೆಳಗಾಗುವಷ್ಟರಲ್ಲಿ ಮರಕ್ಕೆ ಕಟ್ಟಿದ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಭಾನುವಾರ ಜರುಗಿದೆ.

ಅಂತ್ಯ ಸಂಸ್ಕಾರ ಮಾಡಿದ್ದ ಮಗು, ಗುಂಡಿಯಿಂದ ಹೊರಗೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಇದನ್ನು ಓದಿ : ಏಕಾಏಕಿ ಹೆಚ್ಚಾದ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಜನರು ; ಭೀಕರ ದೃಶ್ಯ viral.!

ಮಂಠಾಳ ಗ್ರಾಮದ ನಿವಾಸಿ ಅಂಬಯ್ಯ ಸ್ವಾಮಿ ಅವರ ಒಂದೂವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿತ್ತು. ನಂತರ ತಡ ರಾತ್ರಿ 12ರ ಸುಮಾರಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಕೂಡಿ ಮಗುವಿಗೆ ಗ್ರಾಮದ ಪಕ್ಕದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ತೆರಳಿದ್ದರು.

ಮಗು ಮಣ್ಣಲ್ಲಿ ಹೂತು ಮನೆಗೆ ಬಂದ ಪಾಲಕರು ಹಾಗೂ ಗ್ರಾಮಸ್ಥರಿಗೆ ಬೆಳಗಾಗುವಷ್ಟರಲ್ಲಿ ಆಶ್ಚರ್ಯ ಕಾದಿತ್ತು. ರಾತ್ರಿ ಸಮಯದಲ್ಲಿ ಮಣ್ಣಲ್ಲಿ ಹೂತಿದ್ದ ಮಗು, ಬೆಳಗ್ಗೆ ಮರಕ್ಕೆ ಬಟ್ಟೆಯಿಂದ ಕಟ್ಟಿದ ಜೋಕಾಲಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಪ್ರತ್ಯಕ್ಷಗೊಂಡಿದೆ.

ಇದನ್ನು ಓದಿ : ಪ್ಲೀಸ್ ಇವತ್ತು ಬೇಡ್ವೆ ಬೇಡ ; ಕುಡಿದ ಮತ್ತಲ್ಲಿ ಉರ್ಫಿ ಜಾವೇದ್ ಮಾಡಿದ್ದೇನು ಗೊತ್ತಾ.?

ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಮರದಲ್ಲಿ ಕಂಡು ಆಶ್ಚರ್ಯಕ್ಕೆ ಒಳಗಾದ ಸ್ಥಳೀಯರು, ಮತ್ತೆ ಅದೇ ಸ್ಥಳದಲ್ಲಿ ಮತ್ತೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಮಾಟ ಮಂತ್ರ ಮಾಡುವ ಮಾಂತ್ರಿಕರು ಮಗುವನ್ನು ಮೇಲೆ ತೆಗೆದಿರಬಹುದು ಎಂದು ಕೆಲವರು ಹೇಳಿದರೆ, ಮಗುವಿನ ಮೇಲಿನ ಆಭರಣಗಳು ದೋಚುವ ಉದ್ದೇಶದಿಂದ ಕಿಡಿಗೆಡಿಗಳು ಈ ಕೃತ್ಯ ಎಸಗಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

spot_img
spot_img
- Advertisment -spot_img