ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನಲ್ಲಿ ಗೀಸರ್ (Geyser) ಕೆಲಸ ಮಾಡ್ತಾಯಿಲ್ಲಾ ಎಂದು ಮನೆಗೆ ಕರೆಸಿದ ವೇಳೆ ರಿಪೇರಿ ಮಾಡುವ ನೆಪದಲ್ಲಿ ಮನೆಗೆ ಬಂದ ಟೆಕ್ನಿಷಿಯನ್ ಓರ್ವ ಗೀಸರ್‌ನಲ್ಲಿ ಯಾರಿಗೂ ಗೊತ್ತಾಗದಂತೆ ಹಿಡನ್ ಕ್ಯಾಮೆರಾ ಫಿಕ್ಸ್ ಮಾಡಿದ್ದಾನೆ. ಬಳಿಕ ಮಹಿಳೆಯ ಖಾಸಗಿ ದೃಶ್ಯಗಳನ್ನು ಹಿಡನ್ ಕ್ಯಾಮೆರಾದಲ್ಲಿ ಸೆರೆಹಿಡಿದು ಮಹಿಳೆಗೆ ಬ್ಲ್ಯಾಕ್ ಮೇಲ್ (Black mail for women) ಮಾಡಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಹಿಡನ್ ಕ್ಯಾಮೆರಾ ಇಟ್ಟ ಕಿರಾತಕ (he put a hidden camera), ಮಹಿಳೆ ಸ್ನಾನ ಮಾಡುವ ವಿಡಿಯೋ ರೆಕಾರ್ಡ್ ಮಾಡಿಕೊಂಡು ತನ್ನೊಂದಿಗೆ ಬರದಿದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ಮಹಿಳೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ. ವಿಚಾರ ತಿಳಿದ ಕುಟುಂಬಸ್ಥರು ಟೆಕ್ನಿಷಿಯನ್ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1,036 ವಿವಿಧ ಹುದ್ದೆಗೆ ನೇರ ನೇಮಕಾತಿ.!
ಇದಾದ ಬಳಿಕ ಕುಟುಂಬದವರು ಟೆಕ್ನಿಷಿಯನ್ ಪತ್ತೆಗೆ ಫಾಗಲ್ ಮೈಕ್ ಎಂಬ ಯುವಕನ ಸಹಾಯ ತೆಗೆದುಕೊಳ್ಳುತ್ತಾರೆ. ಫಾಗಲ್ ಮೈಕ್, ಆತನ ಸ್ನೇಹಿತರು ಹಾಗೂ ಮಹಿಳೆಯ ಕುಟುಂಬ ಸದಸ್ಯರು (Friends and family members of the woman) ಸೇರಿಕೊಂಡು ನೀಚ ಟೆಕ್ನಿಷಿಯನ್ ಹಿಡಿಯಲು ಪ್ಲಾನ್ ಮಾಡುತ್ತಾರೆ.
ಇದಾದ ಬಳಿಕ ಫೋನ್‌ನಲ್ಲಿ ಮಹಿಳೆ ಜೊತೆ ಮಾತನಾಡಿದ ಟೆಕ್ನಿಷಿಯನ್ ಮಹಿಳೆಗಾಗಿ ಬಸ್ ನಿಲ್ದಾಣದ ಹತ್ತಿರ ಕಾಯುತ್ತಾ ಇರುವುದಾಗಿ ಹೇಳುತ್ತಾನೆ. ವಿಷಯ ತಿಳಿದು ಅಲ್ಲಿಗೆ ಹೋದ ಕುಟುಂಬ ಸದಸ್ಯರು ಹಾಗೂ ಫಾಗಲ್ ಮೈಕ್ ಸ್ನೇಹಿತರು ನೀಚನನ್ನು ಹಿಡಿದು ನಡು ರೋಡಲ್ಲೇ ಗೂಸಾ ಕೊಟ್ಟಿದ್ದಾರೆ.
ಇದನ್ನು ಓದಿ : ಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.
ನೊಂದ ಮಹಿಳೆ ಆತನ ನೀಚ ಕೃತ್ಯದ ಕುರಿತು ಅಳಲು ತೋಡಿಕೊಂಡಿದ್ದಾಳೆ. ಮಾತ್ರವಲ್ಲ ಮಹಿಳೆಗೆ ಚಪ್ಪಲಿಯಿಂದ ಹೊಡೆಯುವಂತೆ ಅಲ್ಲಿದ್ದವರು ಹೇಳಿದ್ದಾರೆ. ಆದರೆ ನೊಂದ ಮಹಿಳೆ ಚಪ್ಪಲಿ ಬಿಸಾಕಿ ಕೈಯಿಂದ ಹೊಡೆಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ.
ಸದ್ಯ ಕಾಮುಕನಿಗೆ ಥಳಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನೂ ಈ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ವಿಡಿಯೋ ನೋಡಿ :
View this post on Instagram
ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.
ಇದನ್ನು ಓದಿ : ಬಸ್‌ನಿಂದ ತಲೆ ಹೊರಹಾಕಿದ ಮಹಿಳೆ ; Lorry ಡಿಕ್ಕಿಯಾಗಿ ದೇಹದಿಂದ ಬೇರ್ಪಟ್ಟ ರುಂಡ.!
ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).
ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
ಇದನ್ನು ಓದಿ : ಅಪಾರ್ಟ್‌ಮೆಂಟ್‌ನ ಮಹಡಿ ಮೇಲೆ Car ಪಾರ್ಕ್ ಮಾಡತ್ತಿರಾ.? ಹಾಗಾದ್ರೆ ಈ ವಿಡಿಯೋ ನೋಡಿ.!
ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.