Wednesday, May 22, 2024
spot_img
spot_img
spot_img
spot_img
spot_img
spot_img

Mafia : ಪೊಲೀಸ್ ಅಧಿಕಾರಿಯ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಪರಾರಿಯಾದ ಚಾಲಕ.!

spot_img

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿಯೊಬ್ಬ ಅಕ್ರಮ ಮರಳು ದಂಧೆ ತಡೆಯಲು ಯತ್ನಿಸಿದ್ದ ಪೊಲೀಸ್​ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್​ ಹತ್ತಿಸಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ.

ಎಎಸ್‌ಐ ಮಹೇಂದ್ರ ಬಾಗ್ರಿ ಮತ್ತು ಇಬ್ಬರು ಸಹಚರರು ವಾರಂಟ್ ಹಿಡಿದು ಹೋಗಿದ್ದರು. ದಾರಿಯಲ್ಲಿ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ತಮ್ಮ ಕಡೆಗೆ ಬರುತ್ತಿರುವುದನ್ನು ಕಂಡು ಅದನ್ನು ನಿಲ್ಲಿಸಲು ಹೇಳಿದರು ಆದರೂ ಅಧಿಕಾರಿಯ ಮೇಲೆ ಹತ್ತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : Video : ಪತಿಗೆ ಸರಪಳಿಯಿಂದ ಕಟ್ಟಿ ಚಿತ್ರಹಿಂಸೆ ಕೊಟ್ಟ ಪತ್ನಿ ; ಕಾರಣವಾದ್ರು ಏನು.? 

ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ. ಇದಾದ ಕೂಡಲೇ ಅವರನ್ನು ರಕ್ಷಿಸಲು ಇಬ್ಬರು ಪೇದೆಗಳು ತೆರಳಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಎಎಸ್‌ಐ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನೆ ಬಳಿಕ ಚಾಲಕ ಟ್ರ್ಯಾಕ್ಟರ್‌ನಿಂದ ಹಾರಿ ಓಡಿ ಹೋಗಿದ್ದಾನೆ. ವೇಗವಾಗಿ ಬಂದ ವಾಹನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ : ರೆಸ್ಟೋರೆಂಟ್‌ನಲ್ಲಿ ಬ್ಯೂಟಿ ಕ್ವೀನ್ ಗುಂಡಿಕ್ಕಿ ಬರ್ಬರ ಹತ್ಯೆ ; CCTV ಯಲ್ಲಿ ಭಯಾನಕ ದೃಶ್ಯ ಸೆರೆ.!

ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಾಹನದ ಮಾಲೀಕ ಮೂರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಹೆಸರಿಗೆ 30,000 ರೂಪಾಯಿ ಬಹುಮಾನ ಘೋಷಿಸಿದ್ದೇವೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನಾವು ಪ್ರಯತ್ನಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಎಜೇನ್ಸಿಸ್)

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು ಮತ್ತು “ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img