Saturday, July 27, 2024
spot_img
spot_img
spot_img
spot_img
spot_img
spot_img

Attack : ರಕ್ತ ಬರುವಂತೆ ಪೊಲೀಸರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳಿಪುರದಲ್ಲಿ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು (Citizens of Nigeria) ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ : ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಭೀಕರ Mu*der.!

ಸಿಸಿಬಿ ಪೊಲೀಸರು ಡ್ರಗ್ ಪೆಡ್ಲರ್ (drug peddler) ಕುರಿತು ಪರಿಶೀಲನೆಗೆ ತೆರಳಿದ್ದ ವೇಳೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸರ ಕಾರನ್ನು ಜಖಂಗೊಳಿಸಲಾಗಿದೆ ಎನ್ನಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು (escape) ಮುಂದಾದ ನೈಜೀರಿಯಾ ಪ್ರಜೆಗಳು ಸಿಸಿಬಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ತಕ್ಷಣ ಸಿಸಿಬಿ ಪೊಲೀಸರು 112ಗೆ ಕರೆ ಮಾಡಿದ್ದು, ಕರೆ ಮಾಡಿದ ಕೂಡಲೇ ಘಟನಾ ಸ್ಥಳಕ್ಕೆ ಬಂದ ರಾಜಾನುಕುಂಟೆ ಹೊಯ್ಸಳ ಸಿಬ್ಬಂದಿ ಬಂದಿದ್ದಾರೆ. ಆ ವೇಳೆ ಹೊಯ್ಸಳ ಸಿಬ್ಬಂದಿ ಮೇಲೆಯೂ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.

ಇದನ್ನು ಓದಿ : ರದ್ದಾದ ರೇಷನ್ ಕಾರ್ಡ್ ಪಟ್ಟಿ ಆನ್‌ಲೈನ್‌ನಲ್ಲಿ ಬಿಡುಗಡೆ ; ನಿಮ್ಮ ಹೆಸರು ಈ ಲಿಸ್ಟ್‌ನಲ್ಲಿದೆಯಾ ಹೀಗೆ Check ಮಾಡಿ.!

ಘಟನೆಯಲ್ಲಿ ಸಿಸಿಬಿ ಪೊಲೀಸರ ಒಂದು ಜೀಪ್ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪ್ ಗಾಜು ಪುಡಿ ಪುಡಿಯಾಗಿದೆ. ಕಬ್ಬಿಣದ ರಾಡು, ಕಲ್ಲು, ಹೆಲ್ಮೆಟ್‌ನಿಂದ ನೈಜೀರಿಯಾ ಪ್ರಜೆಗಳು ದಾಳಿ ಮಾಡಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಪೊಲೀಸ್ ಸಿಬ್ಬಂದಿಯ ಆರೋಗ್ಯವನ್ನು ಬೆಂ.ಗ್ರಾಮಾಂತರ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ವಿಚಾರಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ (attack) ಮಾಡಿದ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img