ಜನಸ್ಪಂದನ ನ್ಯೂಸ್, ಕೊಪ್ಪಳ : ಬೈಕ್ ವೀಲಿಂಗ್ ಮಾಡುತ್ತಿರುವ ಯುವಕರನ್ನು ತಡೆಯಲು ಮುಂದಾದ ಪೊಲೀಸರ ಮೇಲೆಯೇ ಯುವಕರು ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ದಾಸನಾಳ ಗ್ರಾಮದ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ.
ಇದನ್ನು ಓದಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಗಂಗಾವತಿ ನಗರದ ಅರ್ಬಜ್ ಖಾನ್, ಪಂಪನಗೌಡ ಅವರು ಹಲ್ಲೆ ಮಾಡಿದ್ದು, ಸದ್ಯ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವಕರು ಏಕಾಏಕಿ ಪೊಲೀಸ್ ಕಾನ್‌ಸ್ಟೆಬಲ್ ಬಸವರಾಜ ಮತ್ತು ಗ್ರಾಮೀಣ ಠಾಣೆ ಪಿಎಸ್‌ಐ ಪುಂಡಲಿಕಪ್ಪ, ಮತ್ತೊಬ್ಬ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದಾಸನಾಳದ ಮುಖ್ಯ ರಸ್ತೆಯಲ್ಲಿ ಯುವಕನೊಬ್ಬ ಬೈಕ್ ವೀಲಿಂಗ್ ನಡೆಸುತ್ತಿದ್ದ. ಈ ವೇಳೆ ಕೊಪ್ಪಳದಿಂದ ಗಂಗಾವತಿಗೆ ಬರುತ್ತಿದ್ದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ವಾಹನ ನಿಲ್ಲಿಸಿ, ಬೈಕ್ ವೀಲಿಂಗ್ ತಡೆಯಲು ಮುಂದಾಗಿದ್ದರು.
ಇದನ್ನು ಓದಿ : Health : ಬಿದ್ದ ಜಾಗದಲ್ಲಿ ಮತ್ತೆ ಹುಟ್ಟುತ್ತೆ ಹೊಸ ಹಲ್ಲು ; ಅದ್ಭುತ ಔಷಧ ಕಂಡುಹಿಡಿದ ಸಂಶೋಧಕರು.!
ಈ ವೇಳೆ ಪೊಲೀಸ್ ಅಧಿಕಾರಿಗಳು ಮತ್ತು ಬೈಕ್ ವೀಲಿಂಗ್ ಯುವಕರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಘಟನೆ ಕುರಿತಂತೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.