ಜನಸ್ಪಂದನ ನ್ಯೂಸ್, ಡೆಸ್ಕ್ : ಗರಿಕೆಯನ್ನು ಅನೇಕ ಧಾರ್ಮಿಕ ಪೂಜೆ ವಿಧಿ ವಿಧಾನಗಳಲ್ಲಿ ಬಳಸುತ್ತಾರೆ. ಗಣೇಶ ದೇವರಿಗೆ ಅರ್ಪಿಸಲು ಬಳಸುತ್ತಾರೆ. ಯಾರು ಗಣಪತಿಯ ಪೂಜೆ, ಭಕ್ತಿಯ ಆಚರಣೆ ಮಾಡುತ್ತಾರೋ ಅವರಿಗೆ ಗರಿಕೆ ಮಹತ್ವ ಗೊತ್ತಿದೆ.
ದೇವರಿಗೆ ಹಾಗೂ ಆರೋಗ್ಯಕ್ಕೆ ಶ್ರೇಷ್ಠವಾದ ಪದಾರ್ಥವೆಂದರೆ ಅದು ಗರಿಕೆ. ಗರಿಕೆಯ ರಸ ಕುಡಿದರೆ ಆರೋಗ್ಯ ವರ್ಧಕ ಎಂದು ಹೇಳಲಾಗುತ್ತದೆ. ಗರಿಕೆಯು ಪೋಷಕಾಂಶ ಸಮೃದ್ಧವಾಗಿದೆ. ಗರಿಕೆಯು ಆಯುರ್ವೇದ ಔಷಧದಲ್ಲಿ ಸಾಂಪ್ರದಾಯಿಕ ಮೂಲಿಕೆಯಾಗಿ ಬಳಕೆ ಮಾಡಲಾಗುತ್ತದೆ. ಗರಿಕೆಯಲ್ಲಿರುವ ಔಷಧೀಯ ಗುಣಗಳು ಸಾಕಷ್ಟು ಆರೋಗ್ಯ ಪ್ರಯೋಜನ ನೀಡುತ್ತದೆ.
ತೂಕ ನಷ್ಟ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ.
ಇದನ್ನು ಓದಿ : ನದಿಯಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ದಂಪತಿ; ವಿಡಿಯೋ Viral..!
ನಿಯಮಿತವಾಗಿ ಗರಿಕೆ ಹುಲ್ಲಿನ ರಸವನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಹೃದಯದ ಕಾರ್ಯವು ಆರೋಗ್ಯಕರವಾಗಿ ನಡೆಯುವುದು. ಅಲ್ಲದೆ ಪ್ರಬಲವಾದ ಆಂಟಿ-ಆರ್ಹೆತ್ಮಿಕ್ ಏಜಂಟ್ ಅಂತೆಯೇ ಕೆಲಸ ನಿರ್ವಹಿಸುವುದು. ಹೃದಯ ಹಾಗೂ ರಕ್ತ ಸಂಚಾರಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತಡೆಯುವುದು.
ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
ಇದನ್ನು ಓದಿ : ಬಾಯ್‌ಫ್ರೆಂಡ್ ಜೊತೆ ಓಡಿಹೋಗುತ್ತಿದ್ದ ಯುವತಿಗೆ ನೆನಪಾದ ತಂದೆ ; ಮುಂದೆನಾಯ್ತು? ಈ Video ನೋಡಿ.
ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
ಇದನ್ನು ಓದಿ : Health : ಸೊಂಟದ ಸುತ್ತಮುತ್ತಲಿನ ಕೊಬ್ಬು ಕರಗಬೇಕಾ? ವಾಕ್ ಮಾಡುವಾಗ ಈ ವಿಧಾನ ಅನುಸರಿಸಿ.
ಗರಿಕೆ ಹುಲ್ಲಿನಲ್ಲಿ ಸಿಡಿಪಿಎಫ್(ಸಿನೊಡಾನ್ ಡ್ಯಾಕ್ಟಿಲಾನ್ ಪ್ರೋಟೀನ್) ಇರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವುದು. ಇಮ್ಯೂನೊಮೊಡ್ಯುಲೇಟರಿ ಚಟುವಟಿಕೆಯನ್ನು ತೀವ್ರಗೊಳಿಸುವುದು. ಆಗ ನಮ್ಮ ದೇಹವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು. ಜೊತೆಗೆ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುವುದು.
ಈ ಜ್ಯೂಸ್ ನ್ನು ಹೇಗೆ ತಯಾರಿಸುವುದು.?
ಗರಿಕೆ /ದುರ್ವಾ ಹುಲ್ಲನ್ನು ಸ್ವಲ್ಪ ತೆಗೆದುಕೊಂಡು, ಶುದ್ಧವಾದ ನೀರಿನಲ್ಲಿ ತೊಳೆಯಿರಿ. ನಂತರ ಸ್ವಲ್ಪ ನೀರನ್ನು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ. ರುಬ್ಬಿದ ಪೇಸ್ಟ್ ಅನ್ನು ಸೋಸಿಕೊಂಡು ನಂತರ ಒಂದು ಚಮಚ ಬೆಚ್ಚಗಿನ ನೀರನ್ನು ಸೇರಿಸಿ ಕುಡಿಯಿರಿ.
ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಿತ್ಯವೂ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆ ಗುಣಮುಖವಾಗುವುದು. ಇದರಿಂದ ಆರೋಗ್ಯದಲ್ಲಿ ಯಾವುದೇ ಅಡ್ಡ ಪರಿಣಾಮ ಉಂಟಾಗದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.