ಜನಸ್ಪಂದನ ನ್ಯೂಸ್, ಬೆಂಗಳೂರು ಗ್ರಾಮಾಂತರ : ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ (Create a duplicate record) ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಇರುವ ಸರ್ಕಾರಿ ಜಾಗವನ್ನೇ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ಎಂ.ಡಿ. ಹನೀಫ್, ವಿಜಯನಗರದ ರಾಜಶೇಖರ, ಉಲ್ಲಾಳದ ಮಹಮದ್ ನದಿಮ್ ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.
ಇದನ್ನು ಓದಿ : ರಸ್ತೆಯ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು ; ಮುಂದೆನಾಯ್ತು.? ಈ Video ನೋಡಿ.!
ಈ ಕುರಿತು ಬೆಂಗಳೂರು ಜಿಲ್ಲೆ ವಯರ್ಲೆಸ್ ಜಿಲ್ಲಾ ನಿಯಂತ್ರಣ ಕೊಠಡಿಯ (Wireless District Control Room) ಇನ್ಸ್ಪೆಕ್ಟರ್ ಹಾಗೂ ಎಸ್ಟೇಟ್ ಆಫೀಸರ್ ಸಂತೋಷ್ ಗೌಡ ಅವರು ದೂರು ನೀಡಿದ್ದರು.
ಸಂಜಯ್ ನಗರದ ಮೋಹನ ಶೆಟ್ಟಿ, ಗಣಪತಿ, ಜಹೀರ್ ಎಂಬುವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವಸಂತನಗರದ ಮಿಲ್ಲರ್ಸ್ ರಸ್ತೆಯ ಕೇಂದ್ರ ವಲಯ ಐಜಿಪಿ ಕಚೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಕಚೇರಿ ಇರುವ ಆವರಣಕ್ಕೆ ಅಪರಿಚಿತ ವ್ಯಕ್ತಿಗಳು ಅತಿಕ್ರಮ ಪ್ರವೇಶ (Trespassing) ಮಾಡಿದ್ದು, ತಮ್ಮ ಮೊಬೈಲ್ ನಿಂದ ಕಚೇರಿಯ ಕಟ್ಟಡ ಹಾಗೂ ಆವರಣ ಚಿತ್ರೀಕರಿಸಿ ಫೋಟೋ ಸೆರೆ ಹಿಡಿಯಲು ಮುಂದಾಗಿದ್ದಾರೆ.
ಇದನ್ನು ಗಮನಿಸಿದ ಎಸ್ಟೇಟ್ ಆಫೀಸರ್ ಇನ್ಸ್ಪೆಕ್ಟರ್ ಸಂತೋಷ್ ಗೌಡ ಪ್ರಶ್ನೆ ಮಾಡಿದ್ದಾರೆ.
ಇದನ್ನು ಓದಿ : News : ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ ; ಸಚಿವ ಬಿ.ನಾಗೇಂದ್ರ ರಾಜೀನಾಮೆ.!
ಆಗ ಅಪರಿಚಿತರು ಈ ಸ್ವತ್ತಿನ ದಾಖಲೆಗಳು ನಮ್ಮ ಬಳಿ ಇದೆ. ಸ್ವತ್ತಿನ ಮಾಲೀಕ ಗಣಪತಿ, ಜಹೀರ್ ನಮಗೆ ಜಿಪಿಎ ಮಾಡಿಕೊಟ್ಟಿದ್ದಾರೆ. ನಮ್ಮನ್ನು ಕೇಳಲು ನೀನು ಯಾರು? ಎಂದು ಪ್ರಶ್ನಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 353, 447 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸರು ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದಂತೆ ಕೆಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ