ಜನಸ್ಪಂದನ ನ್ಯೂಸ್, ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾದ ಘಟನೆ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದ (ಬಾನಂತಿ ಕೊಳ್ಳದ ಸಮೀಪ) ಬಳಿ ನಡೆದಿದೆ.
ವೇಗವಾಗಿ ಬಂದ ಟಿಪ್ಪರ್ ಲಾರಿ-ಕಾರಿನ ನಡುವೆ ಅಪಘಾತವಾಗಿದ್ದು. ಡಿಕ್ಕಿ ರಭಸಕ್ಕೆ ಕಾರು ಛಿದ್ರಗೊಂಡಿದ್ದು, ಲಾರಿ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಹೇಳಲಾಗುತ್ತಿದೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ; ಪರಾರಿಯಾಗಲೆತ್ನಿಸಿದ ಆರೋಪಿಗೆ ಗುಂಡೇಟು ಕೊಟ್ಟ Police.!
ಈ ವೇಳೆ ಸ್ವಾಮೀಜಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಶ್ರೀಗಳನ್ನು ಆಂಬ್ಯುಲೆನ್ಸ್ ಮೂಲಕ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.
ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಿವಕುಮಾರ ಸ್ವಾಮೀಜಿಯವರ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದಿದ್ದು, ಕೋಮಾದಲ್ಲಿ ಇದ್ದಾರೆ ಎನ್ನಲಾಗುತ್ತಿದೆ.
ವೇಗವಾಗಿ ಪ್ರೀತಿಯಲ್ಲಿ ಬೀಳುವ 4 ರಾಶಿಗಳು ಇವು ; ನೀವೂ ಈ ರಾಶಿಯಲ್ಲಿರಬಹುದು.?
ಈ ಅಪಘಾತದಲ್ಲಿ ಶಿವಕುಮಾರಸ್ವಾಮೀಜಿಯವರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.