ಜನಸ್ಪಂದನ ನ್ಯೂಸ್, ಕೊಪ್ಪಳ : ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿ ವಂಚನೆ ಆರೋಪ ಕೇಳಿ ಬಂದಿದೆ.
ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಫೋಟೋ, ವಿಡಿಯೋ ಕ್ಲಿಕ್ಕಿಸಿ ಬಳಿಕ ತಟ್ಟೆಯಿಂದ ಮೊಟ್ಟೆಯನ್ನು ತೆಗೆದುಕೊಳ್ಳುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ವಿಡಿಯೋ ವೈರಲ್ ಆಗಿದ್ದು ಇಬ್ಬರನ್ನೂ ಸಸ್ಪೆಂಡ್ ಮಾಡಿದ ಘಟನೆ ನಡೆದಿದೆ.
ಇದನ್ನು ಓದಿ : ಸ್ಮಾರ್ಟ್ಫೋನ್ Charge ಮಾಡುವಾಗ ಈ ತಪ್ಪುಗಳನ್ನು ಮಾಡಲೇಬಾರದು.!
ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನು ಓದಿ : ಕರ್ನಾಟಕ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಿಂದ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವೈರಲ್ ವಿಡಿಯೋದಲ್ಲಿರುವ ದೃಶ್ಯ :
ಅಂಗನವಾಡಿ ಸಹಾಯಕಿ ಮಧ್ಯಾಹ್ನದ ಊಟಕ್ಕೆ ಕುಳಿತಿದ್ದ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿದರು. ಮಕ್ಕಳು ಅದನ್ನು ಬಾಯಲ್ಲಿ ಇಟ್ಟುಕೊಳ್ಳುವ ವೇಳೆಗೆ ಅದನ್ನು ಕಸಿದುಕೊಂಡು ತಟ್ಟೆಯಿಂದಲೇ ತೆಗೆದುಕೊಂಡ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಜೆ. ಸಹಾಯಕಿ ಶೈನಜಾ ಬೇಗಂ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!
ಗುಂಡೂರಿನ ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಯನ್ನು ಮಕ್ಕಳ ತಟ್ಟೆಗೆ ಹಾಕಿ ಬಳಿಕ ವಾಪಸ್ ಪಡೆದು ದುರಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಅಂಗನವಾಡಿ ಶಿಕ್ಷಕಿ, ಸಹಾಯಕಿಯರು ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ವಿಡಿಯೋ ವೈರಲ್ ಆದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದ್ದಾರೆ. ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.