ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಈ ಗ್ರಾಮದಲ್ಲಿ ಶ್ರಾವಣ ಸೋಮವಾರದಂದು ವಾರ ಬಿಡುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಆದರೆ ಶ್ರಾವಣ ಮಾಸದ ಮೊದಲ ದಿನವೇ ಈ ಗ್ರಾಮದಲ್ಲಿ ಅವಘಡವೊಂದು ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದ ವಾಲ್ಮೀಕಿ ದೇವಸ್ಥಾನದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಸಾವಿಗೆ ಘಟನೆ ಸೋಮವಾರ (ಅ.5) ಸಂಜೆ ನಡೆದಿದೆ.
ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಮೃತಪಟ್ಟವರು ಸುಳೇಭಾವಿ ಗ್ರಾಮದ ಕಲಾವತಿ ಮಾರುತಿ ಬಿದರವಾಡಿ (41) ಹಾಗೂ ಸವಿತಾ ಫಕೀರಪ್ಪ ಒಂಟಿ (34) ಎಂದು ತಿಳಿದು ಬಂದಿದೆ.
ಮಹಿಳಾ ಸಂಘದ ವಾರದ ಸಭೆ ನಡೆಸಿದ ಬಳಿಕ ದೇವಸ್ಥಾನವನ್ನು ಎಲ್ಲ ಮಹಿಳೆಯರು ಸೇರಿ ನೀರಿನಿಂದ ತೊಳೆದು ಸ್ವಚ್ಛಗೊಳಿಸಿದ್ದರು.
ಈ ವೇಳೆ ಸ್ವಚ್ಛ ಮಾಡಿದ ನೀರಿನಲ್ಲಿ ವಿದ್ಯುತ್ ತಂತಿ ಕಟ್ ಆಗಿ ಕೆಳಕ್ಕೆ ಬಿದ್ದಿತ್ತು. ಇದನ್ನು ಯಾರು ಗಮನಿಸಿರಲಿಲ್ಲ. ಕೆಲಸ ಮುಗಿಸಿ ಹೊರಗೆ ಬರುವಾಗ ಕಬ್ಬಿಣದ ಗೇಟ್ ಹಾಕುವಾಗ ಓರ್ವ ಮಹಿಳೆಗೆ ವಿದ್ಯುತ್ ಸ್ಪರ್ಶವಾಗಿದೆ. ಕೂಡಲೇ ಈಕೆಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಹಿಳೆಗೂ ವಿದ್ಯುತ್ ತಗುಲಿದೆ.
ಇದನ್ನು ಓದಿ : ರಾತ್ರಿ ಪಕ್ಕದಲ್ಲಿಯೇ Mobile ಇಟ್ಟುಕೊಂಡು ಮಲಗ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.
ವಿದ್ಯುತ್ ಸ್ಪರ್ಶಗೊಂಡು ಸವಿತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೋರ್ವ ಮಹಿಳೆ ಕಲಾವತಿ ಅವರನ್ನು ಕೂಡಲೇ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದು, ಮಕ್ಕಳ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.