ಜನಸ್ಪಂದನ ನ್ಯೂಸ್, ಡೆಸ್ಕ್ : ಯುಕೆಜಿಯಲ್ಲಿ ಓದುತ್ತಿದ್ದ 7 ವರ್ಷದ ಬಾಲಕಿಯೊಬ್ಬಳು ಕ್ಲಾಸ್‌ರೂಮ್‌ನಲ್ಲಿದ್ದಾಗಲೇ ಹೃದಯಾಘಾತವಾಗಿ ಸಾವಿಗೀಡಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹ್‌ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಬಾಲಕಿಯು ಖಾಸಗಿ ಶಾಲೆಯಲ್ಲಿ ಎಲ್‌ಕೆಜಿ ಓದುತ್ತಿದ್ದು, ಕ್ಲಾಸ್ ರೂಮ್ ನಲ್ಲಿದ್ದಾಗಲೇ ಉಸಿರಾಡಲು ಕಷ್ಟವಾಗಿ ಚಡಪಡಿಸಲು ಆರಂಭಿಸಿದ್ದಾಳೆ. ಅಲ್ಲದೇ ಎದೆನೊಯ್ಯುತ್ತಿದೆ ಎಂದು ಹೇಳಿ ಕೊಂಡಿದ್ದಾಳೆ. ಇದಾಗಿ ಸ್ವಲ್ಪ ಹೊತ್ತಿನಲ್ಲೇ ಬಾಲಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ.
ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣ ಕಾಣಿಸಿಕೊಳ್ಳುತ್ತಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು.?
ಅಮ್ರೋಹ್‌ನ ರೇಹ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಶಕರ್‌ಗರ್ಹಿ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲಕಿ, ಹಕಂಪುರದಲ್ಲಿದ್ದ ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು.
ಕ್ಲಾಸ್‌ರೂಮ್‌ನಲ್ಲಿ ಕುಳಿತಿದ್ದ ವೇಳೆ ಆಕೆಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗುತ್ತಿದೆ ಎಂದು ಶಿಕ್ಷಕರಿಗೆ ಬಾಲಕಿ ಹೇಳಿದ್ದಾಳೆ. ಶಿಕ್ಷಕರು ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಾಲಕಿಯ ಪೋಷಕರು ಶಾಲೆಗೆ ಬಂದಿದ್ದು, ಬಾಲಕಿ ಪೋಷಕರೆದುರೇ ಕುಸಿದು ಬಿದ್ದಿದ್ದಾಳೆ.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ತಕ್ಷಣ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆದೊಯ್ದ ನಂತರ ಬಾಲಕಿಯ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಅಲ್ಲಿಂದ ಗಜ್ರೌಲ್‌ನಲ್ಲಿರುವ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿನ ವೈದ್ಯರು ಬಾಲಕಿಯ ತಪಾಸಣೆ ಮಾಡಿ ಆಕೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಿದ್ದಾರೆ.
ಶಾಲೆಗೆ ಹೋಗುತ್ತಿದ್ದ ಪುಟ್ಟ ಮಗಳ ಹಠಾತ್ ಸಾವು ಪೋಷಕರಿಗೆ ನುಂಗಲಾರದ ತುತ್ತಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕೆಲ ದಿನಗಳ ಹಿಂದೆ ಇದೆ ಅಮ್ರೋಹ್‌ನಲ್ಲಿ 16 ವರ್ಷದ ಬಾಲಕ ಮೊಬೈಲ್‌ನಲ್ಲಿ ವೀಡಿಯೋ ನೊಡುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದ.