Tuesday, October 22, 2024
spot_img
spot_img
spot_img
spot_img
spot_img
spot_img
spot_img

Banned : ರಾಜ್ಯಾಧ್ಯಂತ ಶಾಲಾ-ಕಾಲೇಜುಗಳಲ್ಲಿ “ಮೊಬೈಲ್” ಬಳಕೆ ನಿಷೇಧ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು :  ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಶಾಲಾ ಅವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ದಿನೇ ದಿನೇ ಮೊಬೈಲ್ ಉಪಯೋಗವು ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗುತ್ತಿದ್ದು, ಶಾಲಾ ಕಾಲೇಜುಗಳಲ್ಲಿನ ಶೈಕ್ಷಣಿಕ ವಾತಾವರಣವನ್ನು ಸಹ ಹದಗೆಡಿಸುತ್ತಿದೆ, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆ.

ಇದನ್ನು ಓದಿ : 7ನೇ ತರಗತಿ ಪಾಸಾದವರಿಗೆ ಗುಡ್‌ ನ್ಯೂನ್ : KSRTCಯಲ್ಲಿ 13,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ.!

ವಿದ್ಯಾರ್ಥಿಗಳು ತರಗತಿಯಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವುದು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇಧಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ.

ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ.

ಇದನ್ನು ಓದಿ : ಚಿಂಪಾಂಜಿಗೂ ಇದೇ Instagram ಹುಚ್ಚು : ಸ್ಕ್ರೋಲ್‌ ಮಾಡೋದನ್ನು ನೋಡಿದರೆ ನೀವೂ ಶಾಕ್‌ ಆಗ್ತೀರಾ.

ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು.

ಈ ನಿಷೇಧವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img