ವ್ಯಾಲೆಂಟೈನ್ಸ್ ಡೇಗೂ ಮುನ್ನ ಮಾಲ್‌ಗೆ ಪ್ರೇಯಸಿಯನ್ನು ಕರೆತಂದ ಪ್ರೇಮಿ ; ಪತ್ನಿ ಆಗಮನದಿಂದ ಆಗಿದ್ದೇನು?

ವ್ಯಾಲೆಂಟೈನ್ಸ್ ಡೇಗೂ ಮುನ್ನ ಮಾಲ್‌ಗೆ ಪ್ರೇಯಸಿಯನ್ನು ಕರೆತಂದ ಪ್ರೇಮಿ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಫೆಬ್ರವರಿ 14ರಂದು ಆಚರಿಸಲಾಗುವ ವ್ಯಾಲೆಂಟೈನ್ಸ್ ಡೇ ಸಮೀಪಿಸುತ್ತಿದ್ದಂತೆ ದೇಶಾದ್ಯಂತ ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದ ಸಿದ್ಧತೆಗಳು ಜೋರಾಗಿವೆ. ಈ ಹಿನ್ನೆಲೆ ಯುವಕ-ಯುವತಿಯರು ತಮ್ಮ ಪ್ರೀತಿಪಾತ್ರರಿಗೆ ಉಡುಗೊರೆ ಖರೀದಿಸಲು ಶಾಪಿಂಗ್ ಮಾಲ್‌ಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.

ಸೋನಭದ್ರದ ಸಿವಿಲ್ ಲೈನ್ಸ್ ರಸ್ತೆಯಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ವ್ಯಾಲೆಂಟೈನ್ಸ್ ಡೇಗಾಗಿ ಶಾಪಿಂಗ್ ಮಾಡಲು ಬಂದಿದ್ದಾನೆ ಎನ್ನಲಾಗಿದೆ.

ಇದೇ ಸಮಯದಲ್ಲಿ ಅನಿರೀಕ್ಷಿತವಾಗಿ ಆತನ ಪತ್ನಿಯೂ ಅದೇ ಮಾಲ್‌ಗೆ ಆಗಮಿಸಿದ್ದಾಳೆ. ಗಂಡ ಮತ್ತೊಬ್ಬ ಮಹಿಳೆಯೊಂದಿಗೆ ಇರುವುದನ್ನು ಕಂಡ ಪತ್ನಿಗೆ ಆಕ್ರೋಶ ಉಂಟಾಗಿದೆ.

ವ್ಯಾಲೆಂಟೈನ್ಸ್ ಡೇಗೂ ಮುನ್ನ ಮಾಲ್‌ಗೆ ಪ್ರೇಯಸಿಯನ್ನು ಕರೆತಂದ ಪ್ರೇಮಿ ವೈರಲ್‌ ವಿಡಿಯೋ :

Courtesy : Social Media / Twitter 

ಸ್ಥಳದಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪತ್ನಿ ಮತ್ತು ಪ್ರೇಯಸಿಯ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಪರಿಸ್ಥಿತಿ ತೀವ್ರಗೊಂಡಂತೆ ಇಬ್ಬರ ನಡುವೆ ವಾಗ್ವಾದ ಕೈಕಾಲು ಚಾಚುವ ಮಟ್ಟಕ್ಕೆ ತಲುಪಿದೆ. ಈ ವೇಳೆ ಗಂಡ ಪರಿಸ್ಥಿತಿಯಿಂದ ತಪ್ಪಿಸಿಕೊಳ್ಳಲು ಅಲ್ಲಿಂದ ತೆರಳಿದ್ದಾನೆ ಎನ್ನಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಸುಮಾರು 15 ನಿಮಿಷಗಳ ಕಾಲ ಮಾಲ್ ಒಳಗೇ ಇಬ್ಬರು ಮಹಿಳೆಯರ ನಡುವೆ ಗಲಾಟೆ ನಡೆದಿದ್ದು, ಕೂಗಾಟ, ತಳ್ಳಾಟ, ಜುಟ್ಟು ಹಿಡಿದು ಎಳೆದಾಡುವಂತಹ ದೃಶ್ಯಗಳು ಕಂಡುಬಂದಿವೆ. ಈ ಘಟನೆಯಿಂದ ಕೆಲಕಾಲ ಮಾಲ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ತೀವ್ರಗೊಳ್ಳುತ್ತಿದ್ದಂತೆ ಮಾಲ್‌ಗೆ ಬಂದಿದ್ದ ಸಾರ್ವಜನಿಕರು ಹಾಗೂ ಮಹಿಳಾ ಸಿಬ್ಬಂದಿ ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸಿದ್ದಾರೆ. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಘಟನೆಯ ದೃಶ್ಯಗಳನ್ನು ಮೊಬೈಲ್‌ನಲ್ಲಿ ದಾಖಲಿಸಿದ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿಡಿಯೊ ವೈರಲ್ (Video Viral) ಆಗಿದೆ.

ಇದನ್ನು ಓದಿ : ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

ವಿಡಿಯೊ ವೈರಲ್ ಆದ ಬೆನ್ನಲ್ಲೇ ಪೊಲೀಸರು ಘಟನೆಯ ಕುರಿತು ಮಾಹಿತಿ ಪಡೆದು ಸಂಬಂಧಪಟ್ಟ ದಂಪತಿಯನ್ನು ವಿಚಾರಣೆಗೆ ಕರೆಸಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪತಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ವ್ಯಾಲೆಂಟೈನ್ಸ್ ಡೇ ಹತ್ತಿರವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.


Disclaimer : ಈ ಸುದ್ದಿಯಲ್ಲಿ ಉಲ್ಲೇಖಿಸಲಾದ ಮಾಹಿತಿ ಸಾರ್ವಜನಿಕವಾಗಿ ಲಭ್ಯವಿರುವ ಮೂಲಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಆಧಾರಿತವಾಗಿದ್ದು, ಯಾವುದೇ ವ್ಯಕ್ತಿಯ ಮಾನಹಾನಿ ಉದ್ದೇಶದಿಂದ ಪ್ರಕಟಿಸಲ್ಪಟ್ಟಿಲ್ಲ.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top