Thursday, September 19, 2024
spot_img
spot_img
spot_img
spot_img
spot_img
spot_img
spot_img

Cinema : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : “ಕರ್ನಾಟಕದ ಕುಳ್ಳ” ಅಂತಾನೇ ಫೇಮಸ್ ಆಗಿದ್ದ ಹಿರಿಯ ನಟ, ನಿರ್ಮಾಪಕ – ನಿರ್ದೇಶಕ ದ್ವಾರಕೀಶ್ ಇಂದು (ದಿ.16) ಇಹಲೋಕ ತ್ಯಜಿಸಿದ್ದಾರೆ. 81 ವರ್ಷ ವಯಸ್ಸಿನ ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ದ್ವಾರಕೀಶ್ ಅವರ ನಿಧನದ ಬಗ್ಗೆ ಅವರ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿ ಫೇಮಸ್ ಆಗಿದ್ದರು.

SSLC & PUC ಪಾಸಾದ ವಿದ್ಯಾರ್ಥಿಗಳಿಗೆ ರೂ.20,000/- ಸ್ಕಾಲರ್‌ಶಿಪ್.!

ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಅವರು ಮೃತಪಟ್ಟ ಬಗ್ಗೆ ಈ ಮೊದಲು ಹಲವು ಬಾರಿ ವದಂತಿ ಹಬ್ಬಿತ್ತು.

Health : ಪ್ಲಾಸ್ಟಿಕ್ ಕಪ್‌ನಲ್ಲಿ ಚಹಾ ಕುಡಿತೀರಾ? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.!

‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

1964ರಲ್ಲಿ ವೀರಸಂಕಲ್ಪ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಬಂದ ದ್ವಾರಕೀಶ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿರುವ ಇವರು 15ಕ್ಕೂ ಹೆಚ್ಚು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌ ಅವರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದರು.

ದ್ವಾರಕೀಶ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾ. ‘ವೀರ ಸಂಕಲ್ಪ’ ಅವರ ನಟನೆಯ ಮೊದಲ ಸಿನಿಮಾ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img