ಜನಸ್ಪಂದನ ನ್ಯೂಸ್, ಡೆಸ್ಕ್ : ಶೇಂಗಾ ಅಥವಾ ನೆಲಗಡಲೆಯನ್ನು ಬಡವರ ಬಾದಾಮಿ ಅಂತಾನೇ ಕರೆಯಲಾಗುತ್ತದೆ. ಇದು ಅನೇಕ ಪೌಷ್ಟಿಕಾಂಶಗಳ ಆಗರವಾಗಿದೆ.
ಇದು ವಿಟಮಿನ್ ಎ, ವಿಟಮಿ ಬಿ1, ಬಿ3, ಪ್ರೋಟೀನ್, ಕ್ಯಾಲಿಯಂ, ಫೈಬರ್, ಮೆಗ್ನೇಸಿಯಂ, ಪೊಟ್ಯಾಸಿಯಂ, ಮತ್ತು ಆರೋಗ್ಯಕ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ.
ಶೇಂಗಾದಲ್ಲಿ ಮೊನೊಸಾಚುರೇಟೆಡ್ ಮತ್ತು ಬಹುಅಪರ್ಯಾಪ್ತ ಕೊಬ್ಬುಗಳು ಸಮೃದ್ಧವಾಗಿವೆ. ಅವು ಹೃದಯಕ್ಕೆ ಆರೋಗ್ಯಕರ ಕೊಬ್ಬುಗಳಾಗಿವೆ. ಅವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನು ಓದಿ : Special news : ಮೈ ಮೇಲಿನ ಮಚ್ಚೆಗಳೇ ಹೇಳುತ್ತವೆ ನಿಮ್ಮ ವ್ಯಕ್ತಿತ್ವ.!
ಶೇಂಗಾ ನಮ್ಮ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಈ ಶೇಂಗಾವನ್ನು ನೇರವಾಗಿ ಸೇವಿಸುವುದಕ್ಕಿಂತ ನೆನಸಿಟ್ಟು ತಿನ್ನವುದರಿಂದ ಆರೋಗ್ಯ ಪ್ರಯೋಜನಗಳು ಹೆಚ್ಚಾಗುತ್ತವೆ.
ಹಾಗಾದರೆ ಶೇಂಗಾವನ್ನು ನೆನಸಿಟ್ಟು ತಿನ್ನವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು.? ಅಂತ ತಿಳಿಯೋಣ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಂಟಿ ಆಕ್ಸಿಡೆಂಟ್‌ಗಳು ಶೇಂಗಾದಲ್ಲಿ ಹೇರಳವಾಗಿವೆ.
ಇದನ್ನು ಓದಿ : Health : ಪದೇ ಪದೇ ಕೈ ಲಟಿಕೆ ಮುರಿಯುವವರು ಈ ಸುದ್ದಿ ಓದಲೇಬೇಕು.!
* ಪ್ರತಿದಿನ ಬೆಳಿಗ್ಗೆ ನೆನೆಸಿದ ಶೇಂಗಾ ತಿನ್ನುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ.
* ಹೃದಯಾಘಾತ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
* ಹಲವಾರು ರೋಗಗಳು ಮತ್ತು ಸೋಂಕುಗಳನ್ನು ನಿಯಂತ್ರಿಸಬಹುದು.
* ಶೇಂಗಾದಲ್ಲಿ ಕಂಡುಬರುವ ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ಗಳು ದೃಷ್ಟಿ ಸುಧಾರಣೆಗೆ ಸಹಾಯ ಮಾಡುತ್ತದೆ.
ಇದನ್ನು ಓದಿ : Health : ಸೋಡಾ ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳೇನು ಗೊತ್ತಾ.?
* ಶೇಂಗಾ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
* ಸೋಡಾ ಮತ್ತು ಇತರ ಕಾರ್ಬೊನೇಟೆಡ್ ಪಾನೀಯಗಳು ಜೀರ್ಣಾಂಗ ವ್ಯವಸ್ಥೆಯಲ್ಲಿ ಇಂಗಾಲದ ಡೈಆಕ್ಸೈಡ್ ಬಿಡುಗಡೆಯಾಗುವುದರಿಂದ ಅನಿಲ ಮತ್ತು ಉಬ್ಬುವಿಕೆಗೆ ಕಾರಣವಾಗಬಹುದು.
* ಖಾಲಿ ಹೊಟ್ಟೆಯಲ್ಲಿ ನೆನೆಸಿದ ಶೇಂಗಾ ತಿನ್ನುವುದರಿಂದ ಜೀರ್ಣಕ್ರಿಯೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಗ್ಯಾಸ್, ಅಜೀರ್ಣ, ಮಲಬದ್ಧತೆ ಮತ್ತು ಅಸಿಡಿಟಿ ಸಮಸ್ಯೆಗಳನ್ನು ನಿವಾರಿಸುತ್ತದೆ.
ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!
* ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿರುವ ಶೇಂಗಾವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದಾಗ ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಮೂಳೆ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.