Tuesday, September 17, 2024
spot_img
spot_img
spot_img
spot_img
spot_img
spot_img
spot_img

Health : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಏನು ಪ್ರಯೋಜನ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆಯಿರಲಿ, ಮಳೆಗಾಲವಿರಲಿ ಅಥವಾ ಚಳಿಗಾಲವಿರಲಿ ಪಪ್ಪಾಯಿ ಎಲ್ಲಾ ಸೀಸನ್ನಲ್ಲಿಯೂ ಸಿಗುತ್ತದೆ. ಪರಂಗಿ ಅಥವಾ ಪಪ್ಪಾಯಿ ಹಣ್ಣು ತನ್ನಲ್ಲಿ ಅತಿ ಹೆಚ್ಚು ನೈಸರ್ಗಿಕವಾದ ಸಿಹಿ (Natural sweetness) ಅಂಶವನ್ನು ಒಳಗೊಂಡ ಹಣ್ಣಾಗಿದ್ದು, ದೊಡ್ಡವರಿಂದ ಹಿಡಿದು ಚಿಕ್ಕವರವರೆಗೂ ಈ ಹಣ್ಣನ್ನು ಆರಾಮದಾಯಕವಾಗಿ ತಿನ್ನಬಹುದು.

ರಂಗು ರಂಗಾಗಿರುವ ಈ ಪರಂಗಿಯ ಸೇವನೆಯಿಂದ ಆರೋಗ್ಯಕ್ಕೆ ಬಹಳಷ್ಟು ಲಾಭಗಳಿವೆ. ಮಹಿಳೆಯರಿಗಂತೂ ಬಹಳ ಉಪಕಾರಿಯಾದುದು. ಕಡಿಮೆ ಕ್ಯಾಲೋರಿ ಹಾಗೂ ಅಧಿಕವಾದ ಫೈಬರ್ (High fiber) ಅಂಶ ಹೊಂದಿರುವುದು ಪಪ್ಪಾಯ ಹಣ್ಣಿನ ವಿಶೇಷ.

ಇದನ್ನು ಓದಿ : ಮೊಬೈಲ್‌ನಲ್ಲಿ ಮಾತನಾಡುತ್ತಾ ತರಕಾರಿ ಬದಲಿಗೆ ಹೆತ್ತ ಮಗುವನ್ನೇ ಫ್ರಿಡ್ಜ್‌ನಲ್ಲಿಟ್ಟ ಮಹಾತಾಯಿ ; ಭಯಾನಕ Video viral.!

ಇನ್ನೂ ಈ ಹಣ್ಣನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ (Empty Stomach) ಸೇವಿಸುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತೆ?

* ಪಪ್ಪಾಯಿಯಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಗಳು ಹೆಚ್ಚಾಗಿರುವುದರಿಂದ, ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ, ಇದರಲ್ಲಿರುವ ವಿಟಮಿನ್ ಬಿ, ಸಿ, ಇ, ಬೀಟಾ-ಕ್ಯಾರೋಟಿನ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳು (Nutrients), ಹೃದಯದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಇದು ಜೀರ್ಣಕಾರಿ ಕಿಣ್ವಗಳನ್ನು ಹೊಂದಿರುವುದರಿಂದ ಇದು ಕರುಳಿನ ಚಲನೆಗಳನ್ನು (Bowel movements) ಸುಗಮಗೊಳಿಸುತ್ತದೆ. ಜೊತೆಗೆ, ಹೊಟ್ಟೆ ಉಬ್ಬರ, ಮತ್ತು ಮಲಬದ್ಧತೆಯಂತಹ ಜೀರ್ಣಾಂಗಕ್ಕೆ ಸಂಬಂಧಿಸಿಂದ ಸಮಸ್ಯೆಗಳಿಗೆ ತುಂಬಾನೇ ಒಳ್ಳೆಯದು.

* ಇದರಲ್ಲಿ ಫೊಲೇಟ್ ಹಾಗೂ ವಿಟಮಿನ್ ಬಿ ಅಂಶ ಹೆಚ್ಚಾಗಿದೆ. ಇವು ಮೆದುಳು ಹಾಗೂ ಮನಸ್ಥಿತಿಯ ನಿಯಂತ್ರಣಕ್ಕೆ (Mood control) ಬಹಳ ಸಹಕಾರಿ. ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಬುದ್ಧಿಶಕ್ತಿ ಹೆಚ್ಚಾಗುವುದಲ್ಲದೆ ಮನಸ್ಥಿತಿ ಉತ್ತಮವಾಗಿರುತ್ತದೆ.

* ಇದು ದೇಹದಿಂದ ವಿಷಕಾರಿ ಅಂಶಗಳನ್ನು (Toxic elements) ತೆಗೆದುಹಾಕುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

* ಇದರಲ್ಲಿ ವಿಟಮಿನ್ ಗಳು ಹಾಗೂ ಮಿನಿರಲ್ ಅಂಶಗಳಿರುವುದರಿಂದ ದೇಹಕ್ಕೆ ತಕ್ಷಣ ಶಕ್ತಿ (Instant power) ದೊರೆಯುತ್ತದೆ ಹಾಗೂ ಹೆಚ್ಚು ಸಮಯದ ಕಾಲ ಹಸಿವಾಗುವುದಿಲ್ಲ.

* ಪಪ್ಪಾಯ ಹಣ್ಣಿನಲ್ಲಿ ವಿಟಮಿನ್ ಎ ಹೆಚ್ಚಾಗಿರುವುದರಿಂದ ಆರೋಗ್ಯಕರವಾದ ತ್ವಚೆಯನ್ನು ಹೊಂದಬಹುದು. ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವುದರಿಂದ ಮೊಡವೆಗಳು (pimples), ಸಣ್ಣ ಸಣ್ಣ ಗುಳ್ಳೆಗಳು, ಚರ್ಮದ ವಯಸ್ಸಾಗವಿಕೆ ಪ್ರಕ್ರಿಯೆ ಹೀಗೆ ಅನೇಕ ಸಮಸ್ಯೆಗಳು ಇಲ್ಲವಾಗುತ್ತವೆ.

* ವಯಸ್ಸಾದಂತೆ ದೃಷ್ಟಿ ಕಡಿಮೆಯಾಗುವ (Low vision) ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ, ಕಣ್ಣಿನ ದೃಷ್ಟಿ ಸಾಮರ್ಥ್ಯವನ್ನು ಸಹ ಹೆಚ್ಚಿಸುತ್ತದೆ.

* ಇದು ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ. ಈ ಸಮಸ್ಯೆಯಿಂದ ಬಳಲುವವರಿಗೆ ಇದೊಂದು ಬಗೆಯ ಸಿದ್ಧೌಷಧವೆಂದರೆ ತಪ್ಪಾಗಲಾರದು.

* ಮಲಬದ್ಧತೆಯ ಸಮಸ್ಯೆಗೆ ಇದರ ಸೇವನೆ ಬಹಳ ಪರಿಣಾಮಕಾರಿ. ಪಪ್ಪಾಯಿ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವುದರಿಂದ ಇದು ಮಲಬದ್ಧತೆಯ ಅಪಾಯವನ್ನು ತಡೆಯುತ್ತದೆ. ಜೀರ್ಣಕ್ರಿಯೆಯು ಸರಾಗವಾಗುವುದಲ್ಲದೆ (Ease of digestion), ಮಲಬದ್ಧತೆಗೆ ಉತ್ತಮ ಔಷಧಿಯಾಗಿ ಕಾರ್ಯ ನಿರ್ವಹಿಸುತ್ತದೆ.

* ಪಪ್ಪಾಯದಲ್ಲಿ ನಾರಿನ ಅಂಶ ಹೆಚ್ಚಿಗೆ ಇದ್ದು, ಕ್ಯಾಲೋರಿ ಕಡಿಮೆ (Low in calories) ಇರುವುದರಿಂದ ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆ ಇದು ವರದಾನವೇ ಸರಿ. ಇದನ್ನು ಸೇವಿಸುವದರಿಂದ ಇತರೆ ಅನಾರೋಗ್ಯಕರ ಆಹಾರವನ್ನು ತೆಗೆದುಕೊಳ್ಳಬೇಕೆನ್ನುವ ಬಯಕೆ ಕಡಿಮೆಯಾಗುತ್ತದೆ.

ಇದನ್ನು ಓದಿ : ವಿದ್ಯಾರ್ಥಿಗಳಿಗೆ ಸಿಗುತ್ತೆ ರೂ. 20,000/- ವರ್ಧಮಾನ್ ಫೌಂಡೇಶನ್ ಶಕುನ್ ಓಸ್ವಾಲ್ ವಿದ್ಯಾರ್ಥಿವೇತನ.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img