Friday, January 24, 2025
HomeSpecial Newsಚಲಿಸುವ ರೈಲಿನಿಂದ ಕೆಳಗೆ Phone ಬಿದ್ದರೆ ಏನು ಮಾಡಿಬೇಕು ಗೊತ್ತೇ.?
spot_img
spot_img
spot_img
spot_img

ಚಲಿಸುವ ರೈಲಿನಿಂದ ಕೆಳಗೆ Phone ಬಿದ್ದರೆ ಏನು ಮಾಡಿಬೇಕು ಗೊತ್ತೇ.?

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಲಕ್ಷಾಂತರ ಜನರು ದಿನನಿತ್ಯವೂ ರೈಲ್ವೆ ಮೂಲಕ ಪ್ರಯಾಣಿಸುತ್ತಾರೆ. ರೈಲಿನಲ್ಲಿ ತೆರಳುವಾಗ ನಮ್ಮ ವಸ್ತುಗಳನ್ನು ಎಚ್ಚರಿಕೆಯಿಂದ ಇಟ್ಟುಕೊಳ್ಳುವುದು ಅತ್ಯಗತ್ಯ. ಅವುಗಳಲ್ಲಿ ಅತಿ ಅಗತ್ಯವಾದ ವಸ್ತು (An essential item) ಎಂದರೆ ಮೊಬೈಲ್.

ಒಂದು ವೇಳೆ ರೈಲಿನಲ್ಲಿ ತೆರಳುತ್ತಿದ್ದಾಗ ಕೈಜಾರಿ ಮೊಬೈಲ್ ಬಿದ್ದರೆ ಸಾಮಾನ್ಯ ಜನರು ಅಯ್ಯೋ ನನ್ನ ಮೊಬೈಲ್ ಬಿದ್ದೊಯ್ತು ಅಂತ ಏನು ಮಾಡಲು ಸಾಧ್ಯವಾಗದೇ ಮೌನವಾಗಿ ಕುಳಿತು ಬಿಡುತ್ತಾರೆ. ಕೆಲವು ಜನರು ರೈಲಿನ ಚೈನ್ ಅನ್ನು ಎಳೆಯುತ್ತಾರೆ. ಆದರೆ ಈ ರೀತಿ ಮಾಡುವುದು ಸರಿಯೇ.? ಅಥವಾ ನಿಮ್ಮ ಫೋನ್ ಅನ್ನು ಮರಳಿ ಪಡೆಯಲು ನೀವು ಏನು ಮಾಡಬೇಕು (What you need to do to get the phone back) ಅಂತ ಗೊತ್ತಾ.?

ಇದನ್ನು ಓದಿ : ಘಟಪ್ರಭಾ ನದಿಯ Bridge ಗೆ ನೇಣು ಬಿಗಿದುಕೊಂಡು ದಂಪತಿ ಆ*ತ್ಮ*ಹ*ತ್ಯೆ.!

ರೈಲಿನಿಂದ ಫೋನ್ ಬಿದ್ದರೆ ನೀವು ಆ ಟೈಮ್ ನಲ್ಲಿ ಗಾಬರಿಪಡದೇ ಮೊದಲು ರೈಲ್ವೆ ಹಳಿಯ ಪಕ್ಕದಲ್ಲಿ ಅಳವಡಿಸಿರುವ ಕಂಬದ ಮೇಲೆ ಬರೆದಿರುವ ಸಂಖ್ಯೆ ಅಥವಾ ಸೈಡ್ ಟ್ರಾಕ್ ಸಂಖ್ಯೆಯನ್ನು ಗಮನಿಸಬೇಕು.

ನಿಮ್ಮ ಜೊತೆ ತೆರಳುತ್ತಿರುವ ಬೇರೆ ಪ್ರಯಾಣಿಕರಿಂದ ಫೋನ್ ಪಡೆದುಕೊಂಡು ಆರ್‌ಪಿಎಫ್ ಮತ್ತು ಸಂಖ್ಯೆ 182 ಕ್ಕೆ ಮಾಹಿತಿಯನ್ನು ನೀಡಬೇಕು. ಈ ಸಮಯದಲ್ಲಿ, ನಿಮ್ಮ ಫೋನ್ ಯಾವ ಕಂಬ ಅಥವಾ ಟ್ರ್ಯಾಕ್ ಸಂಖ್ಯೆಯ ಸಮೀಪ ಬಿತ್ತು ಅಂತ ತಿಳಿಸಿ.

ಇದನ್ನು ಓದಿ :ಅಪಾರ್ಟ್‌ಮೆಂಟ್‌ನ ಮಹಡಿ ಮೇಲೆ Car ಪಾರ್ಕ್ ಮಾಡತ್ತಿರಾ.? ಹಾಗಾದ್ರೆ ಈ ವಿಡಿಯೋ ನೋಡಿ.!

ಈ ಕ್ರಮವನ್ನು ಅನುಸರಿಸಿದರೆ ರೈಲ್ವೆ ಪೊಲೀಸರಿಗೆ ನಿಮ್ಮ ಫೋನ್ ಪತ್ತೆ ಹಚ್ಚುವುದು ಸುಲಭ ಹಾಗೂ ನಿಮ್ಮ ಫೋನ್ ಸಿಗುವ ಸಾಧ್ಯತೆ ಹೆಚ್ಚಿರುತ್ತದೆ.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಆ ಸ್ಥಳಕ್ಕೆ ತೆರಳಿ ಫೋನ್ ಹುಡುಕುವ ಪ್ರಯತ್ನ ಮಾಡುತ್ತಾರೆ. ಈ ಪ್ರಕ್ರಿಯೆಯ ನಂತರ ನಿಮ್ಮ ಫೋನ್ ಅನ್ನು ಕಾನೂನುಬದ್ಧವಾಗಿ ಮರಳಿ ಪಡೆಯಬಹುದಾಗಿದೆ.

ಇದನ್ನು ಓದಿ : ಸವದತ್ತಿ ಯಲ್ಲಮ್ಮದೇವಿ ಜಾತ್ರೆಗೆ ಬಂದಿದ್ದ ಬಾಲಕರು ನದಿ ನೀರಲ್ಲಿ ಮುಳುಗಿ ಸಾವು.!

182 ಸಂಖ್ಯೆಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ನ ಅಖಿಲ ಭಾರತ ಭದ್ರತಾ ಸಹಾಯವಾಣಿ ಆಗಿದೆ. ನೀವು ಯಾವುದೇ ಟೈಮ್ ನಲ್ಲಿ ಬೇಕಾದ್ರೂ ಸಹಾಯಕ್ಕಾಗಿ ಈ ಸಂಖ್ಯೆಯನ್ನು ಬಳಸಬಹುದು.

ಇನ್ನೂ GRP ಯ ಸಹಾಯವಾಣಿ ಸಂಖ್ಯೆ 1512 ಆಗಿದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕವೂ ಸಹ ಸಹಾಯವನ್ನು ಪಡೆಯಬಹುದು. ರೈಲ್ ಪ್ಯಾಸೆಂಜರ್ ಸಹಾಯವಾಣಿ ಸಂಖ್ಯೆ 138. ರೈಲು ಪ್ರಯಾಣದ ವೇಳೆ ಯಾವುದೇ ರೀತಿಯ ಸಮಸ್ಯೆಯಾದರೆ, 1512 ಅನ್ನು ಡಯಲ್ ಮಾಡುವ ಮೂಲಕ ಸಹಾಯವನ್ನು ಪಡೆದುಕೊಳ್ಳಬಹುದು.

ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.

ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.

ಇದನ್ನು ಓದಿ : ಟ್ರೈನ್‌ನಲ್ಲಿ ಬೆಂಕಿ ವದಂತಿ : ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 10 ಜನರ ಸಾ*ವು ; ವಿಡಿಯೋ.!

ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.

ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.

ಇದನ್ನು ಓದಿ : Super glue ಹಾಕಿ ತುಟಿಗಳನ್ನು ಮುಚ್ಚಿದ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.!

ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).

ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.

ಇದನ್ನು ಓದಿ : ರಸ್ತೆಯಲ್ಲಿ ಮಲಗಿದ್ದ ನಾಯಿಮರಿಯ ಮೇಲೆ ಕಾರು ಹತ್ತಿಸಿದ ಕ್ರೂರ ನಿವೃತ್ತ Police ಸಿಬ್ಬಂದಿ.!

ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.

ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!