Sunday, September 8, 2024
spot_img
spot_img
spot_img
spot_img
spot_img
spot_img
spot_img

Gruha Lakshmi : ಜೂನ್​-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಯಾವಾಗ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದಿರುವ ಪಂಚ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯೂ ಒಂದು. ಆದರೆ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಸರಿಯಾಗಿ ಹಣ ಜಮಾ ಆಗುತ್ತಿಲ್ಲ, ಏಕೆಂದರೆ ಈ ಯೋಜನೆಯಡಿ ಮಾರ್ಚ್ ನಂತರ ಹೊಸದಾಗಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನೂ ಪರಿಗಣಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ.

ಯೋಜನೆಗೆ ಬಿಪಿಎಲ್‌, ಎಪಿಎಲ್‌ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ. ಆದಾಯ ತೆರಿಗೆ ಪಾವತಿದಾರರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ. ಆದರೂ ಆದಾಯ ತೆರಿಗೆ ಪಾವತಿಸುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದರು. ಇಂತಹ 1.78 ಲಕ್ಷ ಮಂದಿಯನ್ನು ಪತ್ತೆ ಮಾಡಲಾಗಿದೆ.

ಇದನ್ನು ಓದಿ : ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಆದರೆ ಮೇ ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆರೋಪಕ್ಕೆ ಬಳ್ಳಾರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಮೇ ತಿಂಗಳ ಕಂತಿನ ಹಣವನ್ನು ಮೇ 5ರಂದೇ ಜಮಾ ಮಾಡಿದ್ದೇವೆ. ಆದರೆ ಜೂನ್​ ಹಾಗೂ ಜುಲೈ ತಿಂಗಳ ಕಂತುಗಳು ಇನ್ನೂ ಜಮಾ ಮಾಡಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಅವೂ ಕೂಡ ಮಹಿಳೆಯರ ಖಾತೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿ : ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA/FDA ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಈಗಾಗಲೇ ಗೃಹಲಕ್ಷ್ಮಿ ಹಣ ಬಂದಿದೆ. ಉಳಿದವರಿಗೂ ಇನ್ನೆರಡು ದಿನಗಳಲ್ಲಿ ಬಾಕಿ ಹಣವನ್ನ ಡಿಟಿಬಿ ಮಾಡುತ್ತೇವೆ. ಮೊದಲು ಜೂನ್​ ತಿಂಗಳ ಬಾಕಿ ತಲುಪಿಸುತ್ತೇವೆ. ಜುಲೈ 15ನೇ ತಾರೀಕಿನ ನಂತರ ಜುಲೈ ತಿಂಗಳ ಕಂತನ್ನು ಹಾಕಲಿದ್ದೇವೆ ಎಂದು ತಿಳಿಸಿದರು.

ಅರ್ಜಿ ಸಲ್ಲಿಸಿ ಈ ಹಿಂದಿನ ತಿಂಗಳ ವರೆಗೆ ಅಂದರೆ ಮೇ-2024 ತಿಂಗಳ ಹಣ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳ ಖಾತೆಗೆ ಜೂನ್ ಮತ್ತು ಜುಲೈ-2024 ತಿಂಗಳ ಹಣ ಜಮಾ ಅಗಲಿದೆ ಇದಲ್ಲದೆ ಪ್ರತಿ ತಿಂಗಳು ಸಹ ಆಹಾರ ಇಲಾಖೆಯಿಂದ ಪಡಿತರ ಚೀಟಿಯ ಅನರ್ಹ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಈ ಪಟ್ಟಿಯಲ್ಲಿರುವವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗುವುದಿಲ್ಲ ಇದನ್ನು ಹೊರತುಪಡಿಸಿ ಉಳಿದ ಎಲ್ಲಾ ಅರ್ಹ ಅರ್ಜಿದಾರರಿಗೆ ರೂ.2,000 ಬ್ಯಾಂಕ್ ಖಾತೆಗೆ ವರ್ಗಾವಣೆ ಅಗಲಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img