ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ತಾಳಿ ಕಟ್ಟಿದ ಮಡದಿ ಬೇರೊಬ್ಬನೊಂದಿಗೆ ಓಡಿಹೋದ ಹಿನ್ನೆಲೆ, ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ದುರ್ದೈವಿ ದೇವರಾಜ್ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಹಳೆಯ ಹಾಡಿಗೆ 90 ವರ್ಷದ ಅಜ್ಜಿಯ ಮಸ್ತ್ ಮಸ್ತ್ ಸ್ಟೆಪ್ಸ್ ; ವಿಡಿಯೋ ನೋಡಿದ್ರೆ ವಾವ್ ಅನ್ನೋದು ಗ್ಯಾರಂಟಿ.!
ಮೃತ ದೇವರಾಜ್ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಸಂಗ ಮಾಡಿ ಆತನ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಂದಿಗೆ ಎಸ್ಕೇಪ್ ಆಗಿದ್ದಾಳೆ.
ಪತ್ನಿ, ಪರ ಪುರುಷನೊಂದಿಗೆ ಓಡಿ ಹೋದ ಸುದ್ದಿ ತಿಳಿದ ದೇವರಾಜ್ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನು ಓದಿ : Video : ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟ ; ಎರಡು ಅಮೂಲ್ಯ ಎತ್ತು ಬಲಿ, ರೈತನ ಮೆದುಳು ನಿಷ್ಕ್ರಿಯ.!
ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟು, ತನಗೆ ಆನಂದ್‌ನಿಂದ ಜೀವ ಬೆದರಿಕೆ ಹಾಕಿದ್ದ ಎಂದು ಉಲ್ಲೇಖಿಸಿದ್ದಾರೆ. ಇಬ್ಬರಿಗೂ ತಕ್ಕ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದ್ದಾರೆ.
ಡೆತ್ ನೋಟ್‌ನಲ್ಲಿ ಪ್ರಧಾನಿ ಮೋದಿ, ಕುಮಾರಸ್ವಾಮಿ, ಡಿಸಿ-ಎಸ್ಪಿಗೆ ನನ್ನ ಸಾವಿಗೆ ನ್ಯಾಯಕೊಡಿಸಿ ಎಂದು ದೇವರಾಜ್ ಮನವಿ ಮಾಡಿದ್ದಾರೆ.
ಡೆತ್ ನೋಟ್ ನಲ್ಲಿ, ಮಾಧವಿಯನ್ನು 17 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದೆ. ಹೊಸಹಳ್ಳಿಯಲ್ಲಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೆ. ನಮಗೆ 16 ಹಾಗೂ 12 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿ ನಿತ್ಯ ಅಂಗಡಿಯ ಬಳಿ ಬರುತ್ತಿದ್ದ ಆನಂದ್ ಕುಮಾರ್, ಈ ವೇಳೆ ಮಾಧವಿಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಪರಾರಿ ಆಗಿದ್ದಾನೆ ಎಂದು ದೇವರಾಜ್ ಬರೆದಿದ್ದಾರೆ.
ಇದನ್ನು ಓದಿ : ನಡು ಬೀದಿಯಲ್ಲೇ ಪುಟ್ಟ ಬಾಲಕನ ಮೇಲೆ ಮಂಗಗಳ ದಾಳಿ : ಸಹಾಯಕ್ಕೆ ಬಾರದ ಮಹಿಳೆಯರ ನಡೆಗೆ ನೆಟ್ಟಿಗರ ಆಕ್ರೋಶ ; Video ವೈರಲ್.!
ಘಟನೆಯ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಧವಿ, ಆನಂದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪ ಮೇಲೆ ದೂರು ದಾಖಲಾಗಿದೆ. ಇನ್ನೂ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮಾಧವಿ, ಆನಂದ್ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.