ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಮನೆಯೊಂದರಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಗಂಡನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಗೃಹಿಣಿ ಸ್ವಾತಿ (21) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈಕೆಯ ಪತಿ ಮೋಹನ್ (26) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ಇದನ್ನು ಓದಿ : ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಅಸಿಸ್ಟಂಟ್ ಸೆಕ್ಯೂರಿಟಿ Officer ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇನ್ನೂ ಗಂಡ ಮೋಹನ್ ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ರಾತ್ರಿ ಮೋಹನ್ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು.
ಇದನ್ನು ಓದಿ : ಪಾರ್ಕ್‌ನಲ್ಲಿ ಕುಳಿತಿದ್ದ ಯುವಕನ ಮೇಲೆ ಬೆತ್ತಲೆಯಾಗಿ ಬಂದ ಯುವತಿಯಿಂದ ಲೈಂಗಿಕ ದೌರ್ಜನ್ಯ ; ವಿಡಿಯೋ Viral.!
ಹೀಗಾಗಿ ಮೃತಳ ಪೋಷಕರು ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ರಾತ್ರಿ ಮೃತಳ ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಮಾಡಿದ್ದರು.
ಆದರೆ ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.