ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾನ್ಯವಾಗಿ ಊಟವಾದ ಬಳಿಕ ಅಥವಾ ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.
ಕೆಲವರು ಆರೋಗ್ಯಕರವಾಗಿ ಜೀವನ ನಡೆಸಿ ಆರೋಗ್ಯಕರವಾದ ಆಹಾರ ಪದಾರ್ಥಗಳನ್ನು ತಿನ್ನುತ್ತಿದ್ದರು ಕೂಡ ದೇಹದ ತೂಕದ ಮೇಲೆ ಮಾತ್ರ ನಿಯಂತ್ರಣ ಹೊಂದಿರುವುದಿಲ್ಲ. ಇದಕ್ಕೆ ಪ್ರಮುಖ ಕಾರಣವೆಂದರೆ ಅವರು ಆಹಾರ ತಿನ್ನುವಾಗ ಮಧ್ಯ ಮಧ್ಯ ನೀರು ಕುಡಿಯುವುದು.
ಇದನ್ನು ಓದಿ : ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಹೊಡೆದ ವಿದ್ಯಾರ್ಥಿನಿ; Video viral.!
ಆದರೆ ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ, ಚರ್ಮ ಮತ್ತು ದೇಹದ ಇತರ ಭಾಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ.
ಊಟವಾದ ತಕ್ಷಣ ನೀರು ಕುಡಿಯುವುದರಿಂದ ಆಗುವ ಹಾನಿಯ ಬಗ್ಗೆ ತಿಳಿಯೋಣ.
ಊಟದ ಜೊತೆ ನೀರು ಕುಡಿಯುವುದರಿಂದ ದೇಹದಲ್ಲಿನ ಪೋಷಕಾಂಶಗಳನ್ನು ಹೀರಿಕೊಳ್ಳುವಲ್ಲಿ ತೊಂದರೆ ಉಂಟಾಗುತ್ತದೆ.
ಇದನ್ನು ಓದಿ : Special news : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ಮಬಾರದು ಏಕೆ.? ಇಲ್ಲಿದೆ ವೈಜ್ಞಾನಿಕ ಕಾರಣ.
ಊಟವಾದ ತಕ್ಷಣ ಅಥವಾ ಊಟದ ಜೊತೆಗೆ ನೀರು ಕುಡಿಯುವುದರಿಂದ ಮೊಡವೆಗಳು, ಕಲೆಗಳು ಇತ್ಯಾದಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು.
ಊಟದ ಜೊತೆ ನೀರು ಕುಡಿಯುವ ಅಭ್ಯಾಸವಿದ್ದರೆ ಕೂಡಲೇ ಈ ಅಭ್ಯಾಸವನ್ನು ಬದಲಿಸಿಕೊಳ್ಳಿ. ಏಕೆಂದರೆ ಊಟದ ಜೊತೆಗೆ ನೀರು ಕುಡಿಯುವುದರಿಂದ ದೇಹದಲ್ಲಿ ಕ್ಯಾಲೋರಿಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ, ಇದರಿಂದಾಗಿ ತೂಕವು ವೇಗವಾಗಿ ಹೆಚ್ಚಾಗುತ್ತದೆ.
ಇದನ್ನು ಓದಿ : Video : ಮಕ್ಕಳಿಗೆ ಮೊಟ್ಟೆ ಕೊಟ್ಟು ವಾಪಸ್ ಕಿತ್ತುಕೊಂಡ ಅಂಗನವಾಡಿ ಸಿಬ್ಬಂದಿಗಳಿಬ್ಬರು ಸಸ್ಪೆಂಡ್.!
ಆಹಾರದ ಜೀರ್ಣಕ್ರಿಯೆಗೆ ನೀರು ಅಡ್ಡಿಯಾಗುವುದರಿಂದ ಊಟದ ಜೊತೆಗೆ ನೀರು ಕುಡಿಯುವುದರಿಂದ ಮಲಬದ್ಧತೆ ಉಂಟಾಗುತ್ತದೆ.
ಊಟದ ಜೊತೆ ಅಥವಾ ಊಟವಾದ ನಂತರ ತಕ್ಷಣ ನೀರು ಕುಡಿಯುವವರಲ್ಲಿ ಕೀಲು ನೋವು, ದೇಹದ ದೌರ್ಬಲ್ಯ, ಆಯಾಸ ಇತ್ಯಾದಿ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ.
ಊಟವಾದ ತಕ್ಷಣ ನೀರು ಕುಡಿಯುವುದು ಅಥವಾ ಊಟದ ಜೊತೆ ನೀರು ಕುಡಿಯುವುದರಿಂದ ಜೀರ್ಣಾಂಗದಲ್ಲಿರುವ ಕಿಣ್ವಗಳು ದುರ್ಬಲಗೊಂಡು ಆಹಾರ ಸರಿಯಾಗಿ ಜೀರ್ಣವಾಗದೆ ಗ್ಯಾಸ್, ಹೊಟ್ಟೆ ನೋವು ಮತ್ತು ಅಜೀರ್ಣಕ್ಕೆ ಕಾರಣವಾಗುತ್ತದೆ.
ಇದನ್ನು ಓದಿ : ವಿದ್ಯಾರ್ಥಿ ಜೊತೆ ಶಿಕ್ಷಕಿಯ love; ಮುಂದೆ ನಡೆದದ್ದು ಊಹೆಗೂ ನಿಲುಕದ್ದು.!
ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ನಿಧಾನಗೊಳಿಸುತ್ತದೆ. ಇದು ದೀರ್ಘಾವಧಿಯಲ್ಲಿ ದೊಡ್ಡ ಹಾನಿಯನ್ನುಂಟು ಮಾಡುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.