Sunday, September 8, 2024
spot_img
spot_img
spot_img
spot_img
spot_img
spot_img
spot_img

Health : ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಯಾಕೆ ತಿನ್ನುತ್ತಾರೆ ಗೊತ್ತಾ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಬಾಯಾರಿಕೆ ಹಾಗೂ ಹಸಿವನ್ನು ನಿವಾರಿಸುವಂತಹ ಪ್ರಮುಖ ಹಣ್ಣಾಗಿರುವ ಕಲ್ಲಂಗಡಿ ಹಣ್ಣಿನಲ್ಲಿ (Watermelon) ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ ಎಂದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ.

ಅದರಲ್ಲೂ ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ (summer) ಬಿಸಿಲಿನ ತಾಪಕ್ಕೆ ಹೇಳಿ ಮಾಡಿಸಿದಂತಹ ಹಣ್ಣಾಗಿದೆ. ಇದು ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾದ್ರೆ ಬನ್ನಿ ಬೇಸಿಗೆಯಲ್ಲಿ ಈ ಹಣ್ಣನ್ನು ಯಾಕೆ ತಿನ್ನುತ್ತಾರೆ ಅಂತ ತಿಳಿಯೋಣ.

ಇದನ್ನು ಓದಿ : Health : ಬೇಸಿಗೆ ಕಾಲದಲ್ಲಿ ಈ ಆಹಾರ ಪದಾರ್ಥಗಳಿಂದ ದೂರವಿರಿ.!

1) ಇದರಲ್ಲಿ ಫಾಲಿಕ್ ಆಸಿಡ್ (folic acid) ಇರುವುದರಿಂದ ಕೂದಲು ಹಾಗೂ ತ್ವಚೆಯ ಆರೋಗ್ಯಕ್ಕೆ ಒಳ್ಳೆಯದು.

2) ಇದರಲ್ಲಿ ಕಬ್ಬಿಣದಂಶ, ಮ್ಯಾಗ್ನಿಷ್ಯಿಯಂ, ಕ್ಯಾಲ್ಸಿಯಂ, ಸತು, ಪೊಟಾಷ್ಯಿಯಂ, ಐಯೋಡಿನ್ ಇರುವುದರಿಂದ ಮೂಳೆಗಳನ್ನು ಬಲವಾಗಿಸುತ್ತದೆ. ಇದರಿಂದ ಸಂಧಿ ನೋವು ಉಂಟಾಗುವುದಿಲ್ಲ.

3) ಪ್ರತಿದಿನ ತಿಂದರೆ ಮಾನಸಿಕ ಒತ್ತಡ (Mental stress) ಕಡಿಮೆಯಾಗಿ ಖಿನ್ನತೆ ಮಾಯವಾಗುವುದು.

4) ಕಲ್ಲಂಗಡಿ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ಮಾಡಿ ಆರೋಗ್ಯವನ್ನು ಹೆಚ್ಚಿಸುತ್ತದೆ.

5) ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತ ಉಂಟಾಗುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿರುವ antioxidants ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

6) ಕಾಲು ಊದುವ ಸಮಸ್ಯೆ ಇರುವವರಿಗೆ ಪ್ರತೀದಿನ ಒಂದು ಕಲ್ಲಂಗಡಿ ಹಣ್ಣನ್ನು ತಿಂದರೆ ಸಾಕು ಈ ಸಮಸ್ಯೆ ಕಡಿಮೆಯಾಗುವುದು

7) ಕಲ್ಲಂಗಡಿ ಹಣ್ಣಿನಲ್ಲಿ ಸಿಟ್ರುಲೈನ್ ಅಧಿಕವಿದ್ದು ಇದು ದೇಹದಲ್ಲಿ ನಿಟ್ರಿಕ್ ಆಕ್ಸೈಡ್ (nitric oxide) ಉತ್ಪತ್ತಿಗೆ ಸಹಾಯಮಾಡುತ್ತದೆ. ನಿಟ್ರಿಕ್ ಆಕ್ಸೈಡ್ ರಕ್ತ ನಾಳಗಳಿಗೆ ವಿಶ್ರಾಂತಿಯನ್ನು ನೀಡುತ್ತದೆ ಹಾಗೂ ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : Health : ಹತ್ತರಕಿ ಸೊಪ್ಪು ತಿನ್ನುವುದರಿಂದ ಆಗುವ ಹತ್ತು ಹಲವು ಆರೋಗ್ಯ ಪ್ರಯೋಜನಗಳು.!

8) ನೀರಿನಂಶ ಅಧಿಕವಿರುವುದರಿಂದ ತೆಳ್ಳಗಾಗಲು ಡಯಟ್ ಮಾಡುವವರು ಒಂದು ಹೊತ್ತು ಕಲ್ಲಂಗಡಿ ಹಣ್ಣು ತಿನ್ನಿ. ಇದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ತೂಕವೂ ಕಡಿಮೆಯಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ (on the internet) ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan news) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img