ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆ ನಾಗಮಂಗಲ (Nagamangala) ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಯುವಕನೋರ್ವ ಸಾವಿಗೀಡಾದ ಘಟನೆ ನಡೆದಿದೆ.
ನಾಗಮಂಗಲದ ಬಸವೇಶ್ವರ ನಗರದ ರಾಮಚಂದ್ರ ಎಂಬಾತ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈತ ಕಾಳೇನಹಳ್ಳಿಯ ಅಪ್ರಾಪ್ತೆಯನ್ನು ಪ್ರೀತಿ ಮಾಡುತ್ತಿದ್ದ (Loved the minor). ಕಳೆದ ವರ್ಷ ಈ ಯುವಕ ಮತ್ತು ಅಪ್ರಾಪ್ತೆ ಮನೆ ಬಿಟ್ಟು ಓಡಿ ಹೋಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು (File a case under the POCSO Act).
ಇದನ್ನು ಓದಿ : ತೊಡೆ ಮೇಲೆ Girlfriend ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಕಾರು ಚಲಾಯಿಸಿದ ಯುವಕ.!
ರಾತ್ರಿ ಯುವತಿ ಮನೆ ಬಳಿ ಹೋದ ಯುವಕ, ಬಂಡೆಗಳನ್ನ ಸಿಡಿಸುವ ಜಿಲೆಟಿನ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಜಿಲೆಟಿನ್ ಸಿಡಿದ ಪರಿಣಾಮ ಯುವಕನ ದೇಹ ಛಿಧ್ರಗೊಂಡಿದೆ (Body piercing).
ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ (Nagamangala Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದಿನ ಸುದ್ದಿ : ಬೆಳ್ಳಂಬೆಳಗ್ಗೆ ವಿಮಾನ ಪತನ: 28 ಜನರ ಸಾವು; ಆಘಾತಕಾರಿ ವಿಡಿಯೋ ವೈರಲ್.!
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳ್ಳಂಬೆಳಗ್ಗೆ ವಿಮಾನವೊಂದು ರನ್‌ವೇಯಿಂದ ಕೆಳಗಿಳಿದು ಪತನಗೊಂಡ ಪರಿಣಾಮ ಕನಿಷ್ಠ 28 ಜನರು ಮೃತಪಟ್ಟ ಘಟನೆ ದಕ್ಷಿಣ ಕೊರಿಯಾದ (South Korea) ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ದಕ್ಷಿಣ ಕೊರಿಯಾದ ದಕ್ಷಿಣ ಜಿಯೋಲ್ಲಾ ಪ್ರಾಂತ್ಯದ ಪ್ರಮುಖ ಪ್ರಾದೇಶಿಕ ಕೇಂದ್ರವಾಗಿ ಕಾರ್ಯನಿರ್ವಹಿಸುವ ನೈಋತ್ಯ ಕರಾವಳಿ ವಿಮಾನ ನಿಲ್ದಾಣದಲ್ಲಿ (South West Coast Airport) ಸ್ಥಳೀಯ ಸಮಯ ಬೆಳಗ್ಗೆ 9:07 ಕ್ಕೆ ಈ ಘಟನೆ ಸಂಭವಿಸಿದೆ.
ದುರಂತ ಘಟನೆಯ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social media) ವೈರಲ್ ಆಗಿದೆ.
ಇದನ್ನು ಓದಿ : ಸಂಚಲನ ಸೃಷ್ಟಿಸಿದ ಒಂದೇ ಕೆರೆಯಲ್ಲಿ PSI, ಲೇಡಿ ಕಾನ್ಸ್‌ಟೇಬಲ್ ಮತ್ತು ಓರ್ವ ಯುವಕನ ಶವ ಪತ್ತೆ ಪ್ರಕರಣ.!
ಬ್ಯಾಂಕಾಕ್‌ನ ಎಜೆಜು ಏರ್ ವಿಮಾನವು, ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ರನ್‌ವೇಯಿಂದ ಹೊರಬಿದ್ದು ಬೇಲಿಗೆ ಬಡಿದಿದೆ (It ran off the runway and hit a fence) ಎಂದು ವರದಿಗಳು ತಿಳಿಸಿವೆ.
ಘಟನೆಯ ಪರಿಣಾಮವಾಗಿ ವಿಮಾನದಲ್ಲಿದ್ದ 181 ಜನರ ಪೈಕಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸ್ಥಳೀಯ ಮಾಧ್ಯಮಗಳು ಹಂಚಿಕೊಂಡ ಫೋಟೋಗಳು ವಿಮಾನದಿಂದ ಹೊಗೆ ಬರುತ್ತಿರುವ ದೃಶ್ಯವನ್ನು ತೋರಿಸಿವೆ. ಇದು ಮುವಾನ್ ಇಂಟರ್‌ನ್ಯಾಶನಲ್‌ನಲ್ಲಿ ನಡೆದ ಮೊದಲ ಪ್ರಮುಖ ಘಟನೆಯಾಗಿದೆ ಎಂದು ತಿಳಿಸಿವೆ.