ಜನಸ್ಪಂದನ ನ್ಯೂಸ್, ಸವದತ್ತಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ಪ್ರೀತಿಸುವಂತೆ ಯುವತಿಯ ಹಿಂದೆ ಬೆನ್ನು ಬಿದ್ದ ಯುವಕ ಹಾಗೂ ಆತನ ಸಹೋದರನನ್ನು ಯುವತಿಯ ತಂದೆಯೇ ಬರ್ಬರವಾಗಿ ಹತ್ಯೆ (Double Murder) ಮಾಡಿದ ಘಟನೆ ನಡೆದಿದೆ.
ಕೊಲೆಯಾದವರು ಕಾರಿಮನಿ ಗ್ರಾಮದ ಮಾಯಪ್ಪ ಹಳೇಗೋಡಿ (22) ಹಾಗು ಯಲ್ಲಪ್ಪ ಹಳೇಗೋಡಿ (22) ಎನ್ನಲಾಗಿದ್ದು, ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಎಂಬಾತ ಕೊಲೆಗೈದ ಆರೋಪಿಯಾಗಿದ್ದಾನೆ.
ಇದನ್ನು ಓದಿ : ಪತಿಯ ಕೈ-ಕಾಲು ಕಟ್ಟಿ ಸಿಗರೇಟ್ನಿಂದ ಪತಿಯ ಖಾಸಗಿ ಅಂಗ ಸುಟ್ಟ ಪತ್ನಿ ; ದೃಶ್ಯ CCTVಯಲ್ಲಿ ಸೆರೆ.!
ಯಲ್ಲಪ್ಪ ಹಳೇಗೋಡಿ ಆರೋಪಿ ಫಕೀರಪ್ಪನ ಪುತ್ರಿಯನ್ನು ಪ್ರೀತಿಸುವಂತೆ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಆಕೆಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ.
ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಯಲ್ಲಪ್ಪನಿಗೆ ಚಾಕುವಿನಿಂದ ಫಕೀರಪ್ಪ ಇರಿದಿದ್ದಾನೆ ಎನ್ನಲಾಗಿದೆ.
ಈ ವೇಳೆ ಯಲ್ಲಪ್ಪನನ್ನು ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ಫಕೀರಪ್ಪ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ಮಾಯಪ್ಪನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.
ಇದನ್ನು ಓದಿ : Health : ರಾತ್ರಿ ಮಲಗುವ ಮುಂಚೆ ನೀರು ಕುಡಿಯುವುದರಿಂದ ಏನಾಗುವುದು ಗೊತ್ತೇ.?
ಘಟನೆ ಬಳಿಕ ಆರೋಪಿ ಫಕೀರಪ್ಪ ಭಾಂವಿಹಾಳ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.