ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಹೆಡೆಮುರಿ ಕಟ್ಟಿದ್ದಾರೆ.
ಐಷಾರಾಮಿ ಜೀವನಕ್ಕಾಗಿ ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ನಜ್ಮಾ ಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳೆಂದು ತಿಳಿದು ಬಂದಿದೆ.
ಇದನ್ನು ಓದಿ : ಶಾಲೆಯಲ್ಲಿ ವಿಡಿಯೋ ಮಾಡುತ್ತಿದ್ದ ಶಿಕ್ಷಕಿ ; ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ಹೊಡೆದಾಟದ ವಿಡಿಯೋ Viral.!
ಘಟನೆಯ ಹಿನ್ನೆಲೆ :
ಬಂಧಿತ ಮಹಿಳೆ ನಜ್ಮಾ ಕೌಸರ್ ಯುವಕರನ್ನು ಗುರಿಯಾಗಿಸಿ ಮಿಸ್ಡ್ ಕಾಲ್ ಕೊಡುತ್ತಿದ್ದಳು. ಬೆಂಗಳೂರಿನ ಯುವಕರನ್ನೇ ಗುರಿಯಾಗಿಸುತ್ತಿದ್ದಳು. ನಂತರ ಅವರು ಪುನಃ ಕರೆ ಮಾಡಿದಾಗ ಪರಿಚಯ ಮಾಡಿಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದಳು. ಇವಳ ಕೃತ್ಯದಲ್ಲಿ ಮಹಮ್ಮದ್ ಆಶೀಕ್, ಖಲೀಲ್ ಕೂಡ ಭಾಗಿಯಾಗುತ್ತಿದ್ದರು.
ಪರಿಚಯವಾದ ಯುವಕರೊಂದಿಗೆ ಸ್ನೇಹ, ಸಲುಗೆಯಿಂದ ಇರುತ್ತಿದ್ದ ಮಹಿಳೆ ಮನೆಯಲ್ಲಿ ಕಷ್ಟ ಇದೆ ಅಂತ ಸಣ್ಣ ಮೊತ್ತದ ಹಣ ಪಡೆಯುತ್ತಿದ್ದಳು. ಬಳಿಕ ಅದನ್ನು ವಾಪಸ್ ಕೊಡುತ್ತಿದ್ದಳು. ಒಂದು ಬಾರಿ ಯುವಕರ ವಿಶ್ವಾಸ ಗಳಿಸಿದ ನಂತರ ಅವರನ್ನು ಖೆಡ್ಡಾಕ್ಕೆ ಕೆಡವಲು ಪ್ಲಾನ್ ಸಿದ್ಧವಾಗುತ್ತಿತ್ತು.
ಇದನ್ನು ಓದಿ : Video : ರೀಲ್ಸ್ ಮಾಡುವಾಗ ಬೈಕ್ ಗೆ ಡಿಕ್ಕಿಯಾದ ಕಾರು ; ಇಬ್ಬರ ಸ್ಥಿತಿ ಗಂಭೀರ.!
ಮನೆಯಲ್ಲಿ ಯಾರೂ ಇಲ್ಲ ಬಾ, ಮನೆಯಲ್ಲೇ ಏಕಾಂತದಲ್ಲಿ ಕಾಲ ಕಳೆಯೋಣ ಎಂದು ಪರಿಚಯವಾದ ಯುವಕರನ್ನು ಲೈಂಗಿಕವಾಗಿ ಪ್ರಚೋದನೆಯಾಗುವಂತೆ ಮಾತನಾಡಿ ಬಲೆಗೆ ಬೀಳಿಸುತ್ತಿದ್ದಳು.
ಈಕೆಯ ಮಾತಿಗೆ ಮರಳಾಗಿ ಮನೆಗೆ ಹೋಗುತ್ತಿದ್ದ ಯುವಕರನ್ನು ಸೀದಾ ಮನೆಯ ಬೆಡ್ ರೂಂಗೆ ಕರೆದೊಯ್ಯುತ್ತಿದ್ದಳು ಎನ್ನಲಾಗಿದೆ. ನಜ್ಮಾ ಕೋರಿಕೆಯಂತೆ ಬೆಡ್ ರೂಂಗೆ ಯುವಕರು ತೆರಳುತ್ತಿದ್ದಂತೆಯೇ ಆಕೆಯ ಗ್ಯಾಂಗ್ ಎಂಟ್ರಿಯಾಗುತ್ತಿತ್ತು.
ಇದನ್ನು ಓದಿ : ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ; ಇಲ್ಲಿದೆ ಡೈರೆಕ್ಟ್ link.!
ಬಳಿಕ ಯಾರೋ ನೀನು? ಇಲ್ಲಿಗೇಕೆ ಬಂದಿದ್ದೀಯಾ? ರೇಪ್ ಮಾಡಲು ಬಂದಿದ್ದಿಯಾ? ಎಂದು ಅವಾಜ್ ಹಾಕ್ತಿದ್ದ ಗ್ಯಾಂಗ್ ಹಣ ಕೊಡುವಂತೆ ಪೀಡಿಸುತ್ತಿತ್ತು. ಹಣ ಕೊಡದಿದ್ದರೆ ರೇಪ್ ಕೇಸ್ ಹಾಕಿಸುತ್ತೇವೆಂದು ಬೆದರಿಸಿ ಹಣ ಕೀಳುತ್ತಿದ್ದರಂತೆ.
ಇನ್ನೂ ಕೊರಿಯರ್ ಬಾಯ್ ಯುವಕನೊಬ್ಬನಿಗೆ ಗ್ಯಾಂಗ್ ಹನಿಟ್ರ್ಯಾಪ್ ಮಾಡಿತ್ತು. ಸಂತ್ರಸ್ತ ಯುವಕ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ಕೊಟ್ಟಿದ್ದ. ಆತ ನೀಡಿದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ನಜ್ಮಾ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಿದ್ದಾರೆ.